ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಸಿರಿಯಾದಲ್ಲಿ ಇಸಿಸ್ ಉಗ್ರರ ಅಟ್ಟಹಾಸ; ಆತ್ಮಾಹುತಿ ದಾಳಿಗೆ 200 ಮಂದಿ ಬಲಿ

ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ (ಇಸಿಸ್) ಉಗ್ರ ಸಂಘಟನೆ ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ...

ಸಂಗ್ರಹ ಚಿತ್ರ
Manjula VN
Updated On : 26 Jul 2018, 11:16 am
ಬೇರುತ್: ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ (ಇಸಿಸ್) ಉಗ್ರ ಸಂಘಟನೆ ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಆತ್ಮಾಹುತಿ ದಾಳಿಗೆ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ. 
ಸಿರಿಯಾ ಸರ್ಕಾರದ ಹಿಡಿತದಲ್ಲಿರುವ ಸ್ವೇಡಾ ನಗರ ಸೇರಿ ಒಟ್ಟು ಮೂರು ಗ್ರಾಮಗಳ ಮೇಲೆ ದಾಳಿ ಸರಣಿ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹಲವು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

Advertisement

Advertisement

ನೈಋತ್ಯಾ ಸಿರಿಯಾದ ಹಲವೆಡೆ ಆತ್ಮಾಹುತಿ ದಾಳಿ ನಡೆಸಲಾಗಿದೆ. ದಾಳಿಯ ಹೊಣೆಯನ್ನು ಇಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಸಂಘಟನೆಯ ಉಗ್ರರು ಸ್ವೆಡಾ ನಗರದಲ್ಲಿರುವ ಸಿರಿಯಾ ಸರ್ಕಾರದ ಪ್ರದೇಶಗಳು ಹಾಗೂ ಭದ್ರತಾ ಪಡೆಗಳ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ಹೇಳಿಕೊಂಡಿದೆ. 

ಸ್ವೆಡಾ ನಗರದ ಮೇಲೆ ನಾಲ್ವರು ಆತ್ಮಾಹುತಿ ದಾಳಿಕೋರರು ದಾಳಿ ನಡೆಸಿದ್ದಾರೆ, ಕೆಲ ಸಣ್ಣ ಗ್ರಾಮಗಳ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು, ಸ್ಥಳೀಯ ನಾಗರೀಕರ ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments