ವಿದೇಶ

ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪದಗ್ರಹಣ: ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ?!

Srinivas Rao BV
ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿಯ ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಆಯ್ಕೆಯನ್ನು ಭಾವಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷ ಪರಿಗಣಿಸಿದೆ. 
ಪಿಟಿಐ ಪಕ್ಷದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಪ್ರಧಾನಿ ಮೋದಿ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದರ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಬಹುಮತ ಗಳಿಸಿದ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿರುವುದು ಭಾರತ-ಪಾಕ್ ನಡುವೆ  ಹೊಸ ಅಧ್ಯಾಯ ಪ್ರಾರಂಭವಾಗುವ ನಿಟ್ಟಿನಲ್ಲಿ ಸ್ವಾಗತಾರ್ಹ ಬೆಳವಣಿಗೆ ಎಂದು ಪಿಟಿಐ ನಾಯಕ ಫಾಹದ್ ಚೌಧರಿ ಹೇಳಿದ್ದಾರೆ. 
ವಿದೇಶಾಂಗ ಇಲಖೆಯೊಂದಿಗೆ ಚರ್ಚೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟಿಸಲಾಗುವುದು ಎಂದು ಖಾನ್ ಪಕ್ಷದ ನಾಯಕರು ಹೇಳಿದ್ದಾರೆ. ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಕ್ಕೆ  ಮೋದಿಗೆ ಖಾನ್ ಧನ್ಯವಾದ ಹೇಳಿದ್ದು, ಉಭಯ ದೇಶಗಳ ನಡುವಿನ ವಿವಾದಗಳು ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಖಾನ್ ಅಭಿಪ್ರಾಯಪಟ್ಟಿದ್ದಾರೆ. 
SCROLL FOR NEXT