ಪ್ರಧಾನಿ ನರೇಂದ್ರ ಮೋದಿ 
ವಿದೇಶ

ಭಾರತ-ಚೀನಾ ಒಟ್ಟಾಗಿ ಕೆಲಸ ಮಾಡಿದರೆ ವಿಶ್ವದ ಭವಿಷ್ಯ ಉಜ್ವಲ: ಪ್ರಧಾನಿ ನರೇಂದ್ರ ಮೋದಿ

ಭಾರತ ಹಾಗೂ ಚೀನಾ ಪರಸ್ಪರ ನಂಬಿಕೆ, ವಿಶ್ವಾಸದಿಂದ ಒಟ್ಟಾಗಿ ಕೆಲಸ ಮಾಡಿದ್ದಾಗ ಏಷ್ಯಾ ಮತ್ತು ವಿಶ್ವ ಉಜ್ವಲ ಭವಿಷ್ಯ ಹೊಂದಲು ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಸಿಂಗಾಪುರ: ಭಾರತ ಹಾಗೂ ಚೀನಾ ಪರಸ್ಪರ ನಂಬಿಕೆ, ವಿಶ್ವಾಸದಿಂದ ಒಟ್ಟಾಗಿ ಕೆಲಸ ಮಾಡಿದ್ದಾಗ ಏಷ್ಯಾ ಮತ್ತು ವಿಶ್ವ ಉಜ್ವಲ ಭವಿಷ್ಯ ಹೊಂದಲು ಸಾಧ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಿಂಗಾಪುರದ  ಶಾಂಘ್ರಿ ಲಾ ದಲ್ಲಿ  ಮಾತನಾಡಿದ ನರೇಂದ್ರಮೋದಿ, ವಿವಾದಾತ್ಮಕ ವಿಷಯಗಳಲ್ಲಿ ಭಾರತ ಹಾಗೂ ಚೀನಾ ದೂರದೃಷ್ಟಿ ಹಾಗೂ ಆಲೋಚನಾತ್ಮಾಕ ನಿರ್ಧಾರ ಕೈಗೊಳ್ಳುವ ಮೂಲಕ ಗಡಿ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲಾಗಿದೆ ಎಂದು ತಿಳಿಸಿದರು.

ಏಷ್ಯಾದ "ಪೈಪೋಟಿಯು" ಈ ಪ್ರದೇಶವನ್ನು ಮತ್ತೆ ಹಿಡಿದಿಟ್ಟುಕೊಳ್ಳುತ್ತದೆ ಮತ್ತು ಏಷ್ಯಾದ ಸಹಕಾರವು ಶತಮಾನವನ್ನು ರೂಪಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ."ಇದು ವಿಭಜನೆ ಮತ್ತು ಒಟ್ಟಿಗೆ ಕೆಲಸ ಮಾಡಲು ಪೈಪೋಟಿಗಿಂತ ಹೆಚ್ಚಾಗಲು ನಮಗೆ ಸಮನ್ವಯಗೊಳಿಸುತ್ತದೆ" ಎಂದು ಪ್ರಧಾನಿ ಹೇಳಿದರು.

ಪ್ರಾದೇಶಿಕ ಜಲಮಾರ್ಗದ ಬಗ್ಗೆ ಮಾತನಾಡಿದ ಮೋದಿ, ಇಂಡೋ- ಫೆಸಿಪಿಕ್ ವಲಯ ಸೇರಿದಂತೆ ಎಲ್ಲಾ ಕಡೆ ಮುಕ್ತವಾಗಿ ಸಂಚರಿಸಲು ಅವಕಾಶವಿದೆ. "ಭಾರತವು ಮುಕ್ತ,  ಅಂತರ್ಗತ ಇಂಡೋ-ಪೆಸಿಫಿಕ್ ಪ್ರದೇಶವನ್ನು ಪ್ರತಿನಿಧಿಸುತ್ತದೆ, ಇದು ಪ್ರಗತಿ ಮತ್ತು ಸಮೃದ್ಧಿಯ ಸಾಮಾನ್ಯ ಅನ್ವೇಷಣೆಯಲ್ಲಿ ನಮ್ಮನ್ನು ತಬ್ಬಿಕೊಳ್ಳುತ್ತದೆ" ಎಂದರು.

ವುಹಾನ್ ನಲ್ಲಿ ಏಪ್ರಿಲ್ ತಿಂಗಳ ಕೊನೆ ವಾರದಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ  ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್  ಔಪಾಚಾರಿಕ ಸಭೆ ನಡೆಸಿ, ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ದಿ ಬಲವರ್ದನೆ ಕುರಿತಂತೆ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!