ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ದ್ವಿಪಕ್ಷೀಯ ಸಂಬಂಧ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ಚೀನಾ ಸ್ವಾಗತ

ಶಾಂಗ್ರಿಲಾ ಶೃಂಗಸಭೆಯಲ್ಲಿ ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು...

ನರೇಂದ್ರ ಮೋದಿ
Lingaraj Badiger
Updated On : 4 Jun 2018, 4:22 am
ಸಿಂಗಾಪುರ: ಶಾಂಗ್ರಿಲಾ ಶೃಂಗಸಭೆಯಲ್ಲಿ ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಸಕಾರಾತ್ಮಕ ಹೇಳಿಕೆಯನ್ನು ಚೀನಾ ಸೋಮವಾರ ಸ್ವಾಗತಿಸಿದೆ.
ಕಳೆದ ಶುಕ್ರವಾರ ಶಾಂಗ್ರಿಲಾ ಶೃಂಗ ಸಭೆಯಲ್ಲಿ ಪ್ರಧಾನ ಭಾಷಣ ಮಾಡಿದ್ದ ಪ್ರಧಾನಿ ಮೋದಿ, ಭಾರತ ಹಾಗೂ ಚೀನಾ ಪರಸ್ಪರ ನಂಬಿಕೆ, ವಿಶ್ವಾಸದಿಂದ ಒಟ್ಟಾಗಿ ಕೆಲಸ ಮಾಡಿದರೆ ಏಷ್ಯಾ ಮತ್ತು ವಿಶ್ವಕ್ಕೆ ಉಜ್ವಲ ಭವಿಷ್ಯ ಇದೆ ಎಂದು ಹೇಳಿದ್ದರು.
ಭಾರತ-ಚೀನಾ  ದ್ವಿಪಕ್ಷೀಯ ಸಂಬಂಧ ಎಲ್ಲ ಕ್ಷೇತ್ರಗಳಿಗೂ ವಿಸ್ತರಿಸುತ್ತಿದೆ. ಗಡಿ ಸಮಸ್ಯೆ ಸೇರಿದಂತೆ ಇನ್ನುಳಿದ ಸವಾಲುಗಳನ್ನು ನಿಭಾಯಿಸುವಲ್ಲಿ ಎರಡೂ ರಾಷ್ಟ್ರಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಬುದ್ಧತೆ ತೋರುತ್ತಿವೆ ಎಂದು ಮೋದಿ ಶ್ಲಾಘಿಸಿದ್ದರು.

Advertisement

Advertisement

ಇಂದು ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಯಿಂಗ್ ಅವರು, ಭಾರತ -ಚೀನಾ ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಸಕಾರಾತ್ಮಕ ಹೇಳಿಕೆ ನಮ್ಮ ಗಮನಕ್ಕೆ ಬಂದಿದ್ದು, ಅಂತಹ ಸಕಾರಾತ್ಮಕ ಹೇಳಿಕೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಹೇಳಿದ್ದಾರೆ.
ಇದೇ ವೇಳೆ ಕಳೆದ ಏಪ್ರಿಲ್ ನಲ್ಲಿ ಪ್ರಧಾನಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ಅವರ ವುಹಾನ್ ಭೇಟಿಯನ್ನು ನೆನಪಿಸಿಕೊಂಡ ಚುನೈಯಿಂಗ್ ಅವರು, ಉಭಯ ನಾಯಕರು ಅಂತರಾಷ್ಟ್ರೀಯ ಗಡಿ ಬಗ್ಗೆ ಮತ್ತು ದ್ವಿಪಕ್ಷೀಯ ಸಂಬಂಧಕ್ಕೆ ಸಂಬಂಧಿಸಿದಂತೆ ಮಹತ್ವ ಚರ್ಚೆ ನಡೆಸಿದ್ದಾರೆ ಮತ್ತು ಒಮ್ಮತದ ನಿರ್ಧಾರಕ್ಕೆ ಬಂದಿದ್ದರು ಎಂದರು.
ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲು ಪ್ರಬುದ್ಧತೆ ಮತ್ತು ಜಾಣ್ಮೆಯನ್ನು ಅಳವಡಿಸಿಕೊಳ್ಳಲು ಎರಡೂ ರಾಷ್ಟ್ರಗಳು ಸಮ್ಮತಿಸಿವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement