ಸಂಗ್ರಹ ಚಿತ್ರ 
ವಿದೇಶ

ಗ್ವಾಟೆಮಾಲ ಜ್ವಾಲಾಮುಖಿ: ಸಾವಿನ ಸಂಖ್ಯೆ 69ಕ್ಕೆ ಏರಿಕೆ, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ.

ಆ್ಯಂಟಿಗುವಾ: ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ.
ಭಾನುವಾರ 6 ಮಂದಿ ಮೃತರಾಗಿದ್ದರೆ ಕೇವಲ 24 ಗಂಟೆಗಳ ಅವಧಿಯಲ್ಲಿ ಸಾವಿನ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಬೂದಿ ಆವರಿಸಿದೆ. ಮರಗಿಡ, ವಾಹನ ಮತ್ತು ರಸ್ತೆಗಳು ಬೂದು ಬಣ್ಣಕ್ಕೆ ತಿರುಗಿವೆ. ಬಂಡೆಗಲ್ಲುಗಳು ಉರುಳಿ ಬಿದ್ದಿವೆ.
ಇನ್ನು ಗ್ವಾಟೆಮಾಲಾ ಸಿಟಿಯಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದು, ಕಣ್ಮರೆಯಾದವರಿಗಾಗಿ ಮತ್ತು ಸಂಕಷ್ಟದಲ್ಲಿ ಸಿಲುಕಿರುವವರಿಗಾಗಿ ರಕ್ಷಣಾ ಪಡೆ ಶೋಧ ಕಾರ್ಯ ಬರದಿಂದ ಸಾಗಿದೆ. ಜ್ವಾಲಾಮುಖಿ ಸ್ಫೋಟದ ನಂತರ ಕಣ್ಮರೆಯಾದವರ ಸಂಖ್ಯೆ ಇನ್ನೂ ಅಸ್ಪಷ್ಟವಾಗಿದೆ ಎಂದು ಗ್ವಾಟೆಮಾಲಾ ನೈಸರ್ಗಿಕ ವಿಕೋಪ ನಿರ್ವಹಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಜ್ವಾಲಾಮುಖಿಯಿಂದ ಹೊರ ಬರುತ್ತಿರುವ ಲಾವಾರಸದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದವರು ಅದರ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಸುಟ್ಟವರ ಅವಶೇಷಗಳನ್ನು ಹೊರ ತೆಗೆಯಲು ಸಾಧ್ಯವಾಗುತ್ತಿಲ್ಲ. ಮೊಣಕಾಲೆತ್ತರದ ಬೂದಿಯಲ್ಲಿ ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ನಡೆಸಿದ್ದಾರೆ. ಅಗ್ನಿ ಪರ್ವತದ ದಕ್ಷಿಣ ಭಾಗವನ್ನು ತಲುಪಲು ರಕ್ಷಣಾ ಪಡೆಗೆ ಸಾಧ್ಯವಾಗುತ್ತಿಲ್ಲ. ಮೃತರ ಸಂಖ್ಯೆ 100ರ ಗಡಿ ದಾಟಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. 
ಇನ್ನು ಘಟನಾ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಅಪಾಯದಲ್ಲಿ ಸಿಲುಕಿ, ತೊಂದರೆಗೊಳಗಾದ 24 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT