ಕ್ಸಿ ಜಿನ್ ಪಿಂಗ್, ನರೇಂದ್ರ ಮೋದಿ 
ವಿದೇಶ

ಭಾರತದಲ್ಲಿ ಅನೌಪಚಾರಿಕ ಭೇಟಿ: ಮೋದಿ ಆಹ್ವಾನ ಒಪ್ಪಿದ ಕ್ಸಿ ಜಿನ್ ಪಿಂಗ್

ವುಹಾನ್ ಮಾದರಿಯಲ್ಲಿ ಮುಂದಿನ ವರ್ಷ ಭಾರತದಲ್ಲಿ ಅನೌಪಚಾರಿಕ ಭೇಟಿಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ...

ಕಿಂಗ್ಡಾವೋ: ವುಹಾನ್ ಮಾದರಿಯಲ್ಲಿ ಮುಂದಿನ ವರ್ಷ ಭಾರತದಲ್ಲಿ ಅನೌಪಚಾರಿಕ ಭೇಟಿಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಆಹ್ವಾನವನ್ನು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಅವರು ಶನಿವಾರ ಹೇಳಿದ್ದಾರೆ.
2019ರಲ್ಲಿ ಅನೌಪಚಾರಿಕ ಭೇಟಿಗಾಗಿ ಭಾರತಕ್ಕೆ ಆಗಮಿಸುವಂತೆ ಪ್ರಧಾನಿ ಮೋದಿ ಅವರು ನೀಡಿದ ಆಹ್ವಾನವನ್ನು ಚೀನಾ ಅಧ್ಯಕ್ಷರು ಒಪ್ಪಿಕೊಂಡಿದ್ದಾರೆ. ಆದರೆ ಅನೌಪಚಾರಿಕ ಭೇಟಿಯ ದಿನಾಂಕದ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದು ಗೋಖಲೆ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಳೆದ ಏಪ್ರಿಲ್ 27 ಮತ್ತು 28ರಂದು ಉಭಯ ನಾಯಕರು ಚೀನಾದ ವುಹಾನ್ ನಲ್ಲಿ ಅನೌಪಚಾರಿಕೆ ಭೇಟಿ ಮಾಡಿ, ದ್ಚಿಪಕ್ಷೀಯ ಸಂಬಂಧಗಳ ವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದರು.
ಇಂದು ಮತ್ತೆ ಎರಡು ದಿನಗಳ ಶಾಂಘೈ ಸಹಕಾರ ಸಂಘಟನೆಯ 18ನೇ ಶೃಂಗಸಭೆ(ಎಸ್ ಸಿಒ)ಯಲ್ಲಿ ಪಾಲ್ಗೊಳ್ಳಲು ಚೀನಾದ ಕ್ವಿಂಗ್ಡಾವೋಗೆ ಆಗಮಿಸಿರುವ ಪ್ರಧಾನಿ ಮೋದಿ ಅವರು, ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ದ್ವಿಪಕ್ಷೀಯ ಬಾಂಧವ್ಯಗಳನ್ನು ಮತ್ತಷ್ಟು ಸೌಹಾರ್ದಗೊಳಿಸುವ ನಿಟ್ಟಿನಲ್ಲಿ ಉಭಯ ನಾಯಕರು ಪರಸ್ಪರ ಚರ್ಚಿಸಿದರು ಎನ್ನಲಾಗಿದೆ. ಅಲ್ಲದೆ ಕಳೆದ ಅನೌಪಚಾರಿಕ ಭೇಟಿ ವೇಳೆ ದ್ಚಿಪಕ್ಷೀಯ ಸಂಬಂಧಗಳ ವೃದ್ಧಿ ಸಂಬಂಧ ನಡೆದಿದ್ದ ಮಾತುಕತೆಗಳನ್ನು ಸಮ್ಮೇಳನದಲ್ಲಿ ಒಪ್ಪಂದಗಳ ಮೂಲಕ ಕಾರ್ಯರೂಪಕ್ಕೆ ತರಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT