ಒಪ್ಪಂದಗಳಿಗೆ ಸಹಿ ಹಾಕಿದ ಕಿಮ್ - ಟ್ರಂಪ್ 
ವಿದೇಶ

'ಅಣ್ವಸ್ತ್ರ ನಿಶ್ಯಸ್ತ್ರೀಕರಣಕ್ಕೆ ಕಿಮ್ ಜಾಂಗ್ ಉನ್ ಒಪ್ಪಿಗೆ'; ಫಲ ನೀಡಿತೇ ಸಿಂಗಾಪುರ ಶೃಂಗಸಭೆ?

ಸಿಂಗಾಪುರ ಶೃಂಗಸಭೆಯಲ್ಲಿ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ 'ಅಣ್ವಸ್ತ್ರ ನಿಶ್ಯಸ್ತ್ರೀಕರಣ'ಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಸಿಂಗಾಪುರ: 7 ದಶಕಗಳ ವೈಷಮ್ಯ ಮರೆತು ಸಿಂಗಾಪುರ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕೊನೆಗೂ 'ಅಣ್ವಸ್ತ್ರ ನಿಶ್ಯಸ್ತ್ರೀಕರಣ'ಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಸಿಂಗಾಪುರದಲ್ಲಿ ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೊಂದಿಗಿನ ಭೇಟಿ ಸಂದರ್ಭದಲ್ಲಿ ಉತ್ತರ ಕೊರಿಯ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಲವು ಮಹತ್ವದ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಈ ಪೈಕಿ ಇಡೀ ಶೃಂಗಸಭೆಯ ಕೇಂದ್ರ ಬಿಂದು ಮತ್ತು ಇಡೀ ವಿಶ್ವವೇ ಎದುರು ನೋಡುತ್ತಿರುವ 'ಅಣ್ವಸ್ತ್ರ ನಿಶ್ಯಸ್ತ್ರೀಕರಣ' ಒಪ್ಪಂದಕ್ಕೆ ಕಿಮ್ ಜಾಂಗ್ ಉನ್ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಮತ್ತೊಂದು ಪ್ರಮುಖ ಒಪ್ಪಂದಕ್ಕೆ ಕಿಮ್ ಜಾಂಗ್ ಉನ್ ಸಹಿ ಹಾಕಿದ್ದು, ದಕ್ಷಿಣ ಕೊರಿಯಾ ಪುನಶ್ಚೇತನ ಒಪ್ಪಂದಕ್ಕೂ ಸಮ್ಮತಿ ಸೂಚಿಸಿ ಸಹಿ ಹಾಕಿದ್ದಾರೆ ಎನ್ನಲಾಗಿದೆ. 
ಸಹಿ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಕಿಮ್ 'ಅಣ್ವಸ್ತ್ರ ನಿಶ್ಯಸ್ತ್ರೀಕರಣ'ಕ್ಕೆ ಒಪ್ಪಿಗೆ ನೀಡಿದ್ದು, ಶೀಘ್ರ ಆ ಕುರಿತು ಕಾರ್ಯ ಮಗ್ನರಾಗಲಿದ್ದಾರೆ ಎಂದು ಹೇಳಿದರು. ಅಂತೆಯೇ ಕಿಮ್ ಜಾಂಗ್ ಉನ್ ರನ್ನು ವೈಟ್ ಹೌಸ್ ಗೆ ಆಹ್ವಾನಿಸುವಿರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್ ಖಂಡಿತಾ ಆಹ್ವಾನಿಸುತ್ತೇನೆ. ಹಳೆಯ ವಿಚಾರಗಳನ್ನು ನಾವು ಮರೆಯಲು ನಿರ್ಣಯ ಕೈಗೊಂಡಿದ್ದೇವೆ. ಇನ್ನು ಮುಂದೆ ಹೊಸ ಬೆಳವಣಿಗೆಯನ್ನು ನೋಡುತ್ತೀರೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್, ನಿಜಕ್ಕೂ ಇದೊಂದು ಐತಿಹಾಸಿಕ ಸಭೆಯಾಗಿತ್ತು. ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ ಬಾಂಧವ್ಯ ನಿರೀಕ್ಷೆ ಮೀರಿ ವೃದ್ಧಿಸಲಿದ್ದು, ಅಮೂಲಾಗ್ರ ಬದಲಾಣೆ ನೋಡಲಿದ್ದೀರಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ