ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಕಿಮ್-ಟ್ರಂಪ್ ಐತಿಹಾಸಿಕ ಭೇಟಿ: ಕುತೂಹಲದಿಂದ ನಿದ್ರೆಯೇ ಮಾಡದ ದ.ಕೊರಿಯಾ ಅಧ್ಯಕ್ಷ

ಅತ್ತ ಸಿಂಗಾಪುರದಲ್ಲಿ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐತಿಹಾಸಿ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ ಇತ್ತ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ರಾತ್ರಿ ಇಡೀ ರಾತ್ರಿ ನಿದ್ರೆಯನ್ನೇ ಮಾಡಿಲ್ಲವಂತೆ.

ಐತಿಹಾಸಿಕ ಸಿಂಗಾಪುರ ಶೃಂಗಸಭೆ ನೇರ ಪ್ರಸಾರ ವೀಕ್ಷಿಸುತ್ತಿರುವ ದ.ಕೊರಿಯಾ ಅಧ್ಯಕ್ಷ
Srinivasa Murthy VN
Updated On : 12 Jun 2018, 2:48 am
ಸಿಯೋಲ್: ಅತ್ತ ಸಿಂಗಾಪುರದಲ್ಲಿ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐತಿಹಾಸಿ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರೆ ಇತ್ತ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ರಾತ್ರಿ ಇಡೀ ರಾತ್ರಿ ನಿದ್ರೆಯನ್ನೇ ಮಾಡಿಲ್ಲವಂತೆ.
ಹೌದು..ಬರೊಬ್ಬರಿ 7 ದಶಕಗಳ ವೈಷಮ್ಯಕ್ಕೆ ಇಂದು ಸಿಂಗಾಪುರ ಶೃಂಗಸಭೆಯಲ್ಲಿ ತೆರೆ ಎಳೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಉತ್ತರ ಕೊರಿಯಾದ ಬದ್ದ ವೈರಿ ಮತ್ತು ಅಮೆರಿಕದ ಸ್ನೇಹ ರಾಷ್ಟ್ರ ದಕ್ಷಿಣ ಕೊರಿಯಾ ತುದಿಗಾಲಲ್ಲಿ ನಿಂತಿತ್ತು. ಸ್ವತಃ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ-ಇನ್ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಇಡೀ ರಾತ್ರಿ ನಿದ್ದೆ ಗೆಟ್ಟಿದ್ದಾರಂತೆ.
ಕಿಮ್ ಜಾಂಗ್ ಉನ್ ಮತ್ತು ಡೊನಾಲ್ಡ್ ಟ್ರಂಪ್ ಐತಿಹಾಸಿಕ ಭೇಟಿಯನ್ನು ದಕ್ಷಿಣ ಕೊರಿಯಾ ಮಾಧ್ಯಮಗಳು ನೇರ ಪ್ರಸಾರ ಮಾಡಿದ್ದು, ಈ ನೇರ ಪ್ರಸಾರ ಮತ್ತು ತತ್ ಕ್ಷಣದ ಸುದ್ದಿಗಳನ್ನು ಅಧ್ಯಕ್ಷ ಮೂನ್ ಜೇ-ಇನ್ ರಾತ್ರಿ ಇಡೀ ನೋಡಿದ್ದಾರೆ. ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನ ಕಚೇರಿಯಲ್ಲಿ ಅಧ್ಯಕ್ಷ ಮೂನ್ ಜೇ-ಇನ್ ರಾತ್ರಿ ಇಡೀ ಶೃಂಗಸಭೆ ಕುರಿತ ನೇರ ಪ್ರಸಾರ ವೀಕ್ಷಿಸುತ್ತಿದ್ದರು ಎಂದು ದಕ್ಷಿಣ ಕೊರಿಯಾ ಅಧ್ಯಕ್ಷರ ಕಚೇರಿ ಮಾಹಿತಿ ನೀಡಿದೆ. ಅಲ್ಲದೆ ಅಧ್ಯಕ್ಷ ನೇರ ಪ್ರಸಾರ ವೀಕ್ಷಿಸುತ್ತಿರುವ ಫೋಟೋವನ್ನು ಕೂಡ ಬಿಡುಗಡೆ ಮಾಡಿದೆ.

Advertisement

Advertisement

ಅಧ್ಯಕ್ಷ ಮೂನ್ ಜೇ-ಇನ್ ಅವರಿಗೆ ಅವರ ಕ್ಯಾಬಿನೆಟ್ ಸಟಿವರು ಕೂಡ ಸಾಥ್ ನೀಡಿದ್ದು, ಪ್ರತೀ 10 ನಿಮಿಷಕ್ಕೊಮ್ಮೆ ಅಧ್ಯಕ್ಷರಿಗೆ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದರಂತೆ. 
ಇನ್ನು ಇದೇ ವಿಚಾರವಾಗಿ ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿದ್ದ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ ಇನ್ ಅವರು, ಐತಿಹಾಸಿಕ ಶೃಂಗಸಭೆ ಸಂಬಂಧ ಸುಧೀರ್ಘ ಚರ್ಚೆ ನಡೆಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments