ಗೋಲ್ಡನ್ ಟೆಂಪಲ್ ಕಾಂಪ್ಲೆಕ್ಸ್ ನಲ್ಲಿಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆಯ 34ನೇ ವರ್ಷಾಚರಣೆ ಆಚರಿಸಿದ್ದ ಸಿಖ್ಖರು(ಸಂಗ್ರಹ ಚಿತ್ರ) 
ವಿದೇಶ

ಆಪರೇಷನ್‌ ಬ್ಲೂ ಸ್ಟಾರ್‌ ಕಡತ ಬಹಿರಂಗಕ್ಕೆ ಬ್ರಿಟನ್ ಕೋರ್ಟ್ ಆದೇಶ

ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆಯಲ್ಲಿ ಬ್ರಿಟನ್‌ ಸರ್ಕಾರ ವಹಿಸಿರುವ ಪಾತ್ರದ ಬಗ್ಗೆ ಮಾಹಿತಿ ಹೊಂದಿದೆ...

ಲಂಡನ್‌: ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆಯಲ್ಲಿ ಬ್ರಿಟನ್‌ ಸರ್ಕಾರ ವಹಿಸಿರುವ ಪಾತ್ರದ ಬಗ್ಗೆ ಮಾಹಿತಿ ಹೊಂದಿದೆ ಎನ್ನಲಾದ ಗೌಪ್ಯ ಕಡತಗಳನ್ನು ಬಹಿರಂಗಗೊಳಿಸಬೇಕು ಎಂದು ಬ್ರಿಟನ್‌ ಕೋರ್ಟ್ ಆದೇಶಿಸಿದೆ. 
ಕಡತ ಬಹಿರಂಗಪಡಿಸುವುದರಿಂದ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧಕ್ಕೆ ಧಕ್ಕೆಯಾಗಲಿದೆ ಎಂಬ ಬ್ರಿಟಿಷ್ ಸರ್ಕಾರದ ವಾದವನ್ನು ತಳ್ಳಿಹಾಕಿದ ಮಾಹಿತಿ ನ್ಯಾಯಾಲಯ ನ್ಯಾಯಾಧೀಶ ಮರ್ರಿ ಷಾಂಕ್ಸ್ ಅವರು, ಬ್ಲೂ ಸ್ಟಾರ್‌ ಕಾರ್ಯಾಚರಣೆಯ ಅವಧಿಗೆ ಸಂಬಂಧಿಸಿದ ಕಡತಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಸೂಚಿಸಿದ್ದಾರೆ.
ಆಪರೇಷನ್‌ ಬ್ಲೂ ಸ್ಟಾರ್‌ ಗೆ ಸಂಬಂಧಿಸಿದ ಮಾಹಿತಿ ಕೋರಿ ಫ್ರಿಲ್ಯಾನ್ಸ್ ಪತ್ರಕರ್ತ ಫಿಲ್ ಮಿಲ್ಲರ್ ಅವರು ಅರ್ಜಿ ಸಲ್ಲಿಸಿದ್ದರು.
ಗೌಪ್ಯ ಕಡತಗಳನ್ನು ಬಹಿರಂಗಗೊಳಿಸುವುದರಿಂದ ಕಾರ್ಯಾಚರಣೆಯಲ್ಲಿ ಬ್ರಿಟನ್‌ ಪಾಲ್ಗೊಂಡಿದೆಯೇ ಎಂಬ ಬಗ್ಗೆ ನಿಖರ ಮಾಹಿತಿ ದೊರಕಲಿವೆ ಎನ್ನುವುದು ಮಿಲ್ಲರ್ ಭಿಪ್ರಾಯವಾಗಿದೆ.
ಈ ಹಿಂದೆಯೂ  ಸಿಖ್‌ ಒಕ್ಕೂಟವೊಂದು ಕಡತಗಳನ್ನು ಬಹಿರಂಗಗೊಳಿಸಬೇಕು ಎಂದು  ಮಾಹಿತಿ ಆಯುಕ್ತರಿಗೆ ದೂರು ಸಲ್ಲಿಸಿತ್ತು. ಆದರೆ ‘ಅತಿ ಸೂಕ್ಷ್ಮ ಕಡತಗಳು’ ಎಂಬ ಕಾರಣಕ್ಕೆ ಇವುಗಳನ್ನು ಬಹಿರಂಗಗೊಳಿಸಲಾಗಿರಲಿಲ್ಲ.
1984ರಲ್ಲಿ ಅಮೃತಸರದ ಸ್ವರ್ಣ ಮಂದಿರದಲ್ಲಿ ನಡೆದಿದ್ದ ಆಪರೇಷನ್‌ ಬ್ಲೂ ಸ್ಟಾರ್ ಕಾರ್ಯಾಚರಣೆಯಲ್ಲಿ ನೂರಾರು ಸಿಖ್ಖರನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

‘ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?’: ಕಂಗನಾಗೆ ಬಾಬಾ ರಾಮ್​ದೇವ್ ತೀವ್ರ ತರಾಟೆ; ಸಂಸದೆ ವಿರುದ್ಧ ಕ್ರಮ ಕೈಗೊಳ್ಳುವಂತೆ BJPಗೆ ಆಗ್ರಹ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?