ಮೇರಿಲ್ಯಾಂಡ್: ಪತ್ರಿಕಾ ಸಂಸ್ಥೆ ಮೇಲೆ ಗುಂಡಿನ ದಾಳಿ, ಐವರ ಸಾವು, ಹಲವರಿಗೆ ಗಾಯ
ಶುಕ್ರವಾರ ಬೆಳ್ಳಂ ಬೆಳಗ್ಗೆಯೇ ಅಮೆರಿಕ ಶಸ್ತ್ರಧಾರಿಯ ದಿಢೀರ್ ದಾಳಿಯಿಂದಾಗಿ ಬೆಚ್ಚಿಬಿದ್ದಿದ್ದು, ಪತ್ರಿಕಾ ಸಂಸ್ಥೆಯ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಪತ್ರಿಕಾ ಸಂಸ್ಥೆಯ ಐವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೇರಿಲ್ಯಾಂಡ್: ಶುಕ್ರವಾರ ಬೆಳ್ಳಂ ಬೆಳಗ್ಗೆಯೇ ಅಮೆರಿಕ ಶಸ್ತ್ರಧಾರಿಯ ದಿಢೀರ್ ದಾಳಿಯಿಂದಾಗಿ ಬೆಚ್ಚಿಬಿದ್ದಿದ್ದು, ಪತ್ರಿಕಾ ಸಂಸ್ಥೆಯ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಪತ್ರಿಕಾ ಸಂಸ್ಥೆಯ ಐವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಅಮೆರಿಕದ ಮೇರಿಲ್ಯಾಂಡ್ ರಾಜಧಾನಿ ಅನ್ನಾಪೋಲಿಸ್ ನ ಗೆಜೆಟ್ ಪತ್ರಿಕಾ ಕಚೇರಿ ಮೇಲೆ ಶಸ್ತ್ರಧಾರಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಕಚೇರಿಯಲ್ಲಿದ್ದ ಐವರು ಸಿಬ್ಬಂದಿಗಳು ಗುಂಡೇಟಿನಿಂದ ಸಾವಿಗೀಡಾಗಿದ್ದಾರೆ.
ವಿಚಾರ ತಿಳಿದ ಕೂಡಲೇ ಅನ್ನಾಪೋಲಿಸ್ ನ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು 2 ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ದಾಳಿಕೋರನನ್ನು ಬಂಧಿಸಿದ್ದಾರೆ. ಪ್ರಸ್ತುಚ ಕಚೇರಿಯನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದು, ಕಟ್ಟಡವನ್ನು ತೀವ್ರ ಶೋಧಕ್ಕೆ ಒಳಪಡಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಹಿಂದೆ ಇಸಿಸ್ ಉಗ್ರಗಾಮಿಗಳು ಚಾರ್ಲಿಹೆಬ್ಡೋ ವ್ಯಂಗ್ಯಚಿತ್ರ ವಿರೋಧಿಸಿ ಫ್ರಾನ್ಸ್ ಕಚೇರಿ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಹಲವರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.