ಬಾಂಗ್ಲಾದೇಶದ ಪ್ರಯಾಣಿಕ ವಿಮಾನ ನೇಪಾಳದಲ್ಲಿ ಬೆಂಕಿಗಾಹುತಿ 
ವಿದೇಶ

ನೇಪಾಳ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನ ಪತನ; 49 ಮಂದಿ ಸಾವು

ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ

ಕಠ್ಮಂಡು(ನೇಪಾಳ): ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕನಿಷ್ಠ 17 ಮಂದಿಯನ್ನು ರಕ್ಷಿಸಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ  ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾರ್ಮೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುರ್ತಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 67 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿಗಳಿದ್ದರು.

ಇದಾಗಲೇ ನಾವು ಮೃತ ದೇಹಗಳನ್ನು ವಿಮಾನದಿಂಡ ಹೊರತೆಗೆದಿದ್ದೇವೆ. ಗಾಯಗೊಂಡ  20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೇಪಾಳ ಸರ್ಕಾರದ ವಕ್ತಾರ ನಾರಾಯಣ ಪ್ರಸಾದ್ ದುವಾದಿ ಎಪಿಪಿಗೆ ಹೇಳಿದ್ದಾರೆ.


ಘಟನೆಯಲ್ಲಿ ಓಟ್ಟು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ನಾಲ್ಕು ಗಂಟೆಯವರೆವಿಗೆ ಒಟ್ಟು 12 ಮೃತದೇಹಗಳನ್ನು ವಶಕ್ಕೆ ಹೊರತೆಗೆಯಲಾಗಿದ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ