ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮಾ.20 ರಂದು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿ ಮಾಡುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕ್ಸಿ ಜಿನ್ ಪಿಂಗ್ ಅವರು ಚೀನಾ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವ ಹಿನ್ನೆಲೆಯಲ್ಲಿ ದೂರವಾಣಿ ಸಂಭಾಷಣೆ ನಡೆದಿದ್ದು, ಇಬ್ಬರೂ ನಾಯಕರು ಪರಸ್ಪರ ವಿಶ್ವಾಸವನ್ನು ಉತ್ತೇಜಿಸುವುದಕ್ಕೆ ಒಪ್ಪಿದ್ದಾರೆ. ಚೀನಾ ಸುದ್ದಿ ಸಂಸ್ಥೆಯೊಂದರ ವರದಿಯ ಪ್ರಕಾರ ಅಧ್ಯಕ್ಷರಾಗಿ ಪುನರಾಯ್ಕೆಯಾಗಿರುವುದು ಕ್ಸಿ ಜಿನ್ಪಿಂಗ್ ಅವರಿಗೆ ಇಡೀ ಚೀನಾ ದೇಶದ ಬೆಂಬಲ ದೊರೆತಿರುವುದನ್ನು ತೋರುತ್ತದೆ ಎಂದು ಮೋದಿ ಹೇಳಿದ್ದಾರೆ.
ಇದೇ ವೇಳೆ ಭಾರತದೊಂದಿಗೆ ಪ್ರಮುಖ ಕಾರ್ಯತಂತ್ರ, ದ್ವಿಪಕ್ಷೀಯ ಸಂಬಂಧ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತುಕತೆಗೆ ಸಿದ್ಧವಿರುವುದಾಗಿ ಕ್ಸಿ ಜಿನ್ಪಿಂಗ್ ಸಹ ಹೇಳಿದ್ದಾರೆ.