ಲಂಡನ್: ವಿಶ್ವಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಫೇಸ್ ಬುಕ್ ಮಾಹಿತಿ ಸೋರಿಕೆ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಆ್ಯಪ್ ತಯಾರಕ ಅಲೆಕ್ಸಾಂಡರ್ ಕೊಗನ್ ಹೇಳಿದ್ದಾರೆ.
5 ಕೋಟಿ ಫೇಸ್‌ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿಯು ರಾಜಕೀಯ ಕಾರಣಗಳಿಗಾಗಿ ಸೋರಿಕೆಯಾಗಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೊಗನ್, ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ ಸಂಪೂರ್ಣವಾಗಿ ಕಾನೂನುಬದ್ಧ ಮತ್ತು ನಿಯಮಗಳನ್ವಯ ಸೇವೆ ನೀಡುವುದಾಗಿ ಭರವಸೆ ನೀಡಿತ್ತು ಎಂದು ಹೇಳಿದ್ದಾರೆ.
ಬಿಬಿಸಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ತಮ್ಮ ವಿರುದ್ಧದ ಆರೋಪಗಳಿಂದ ನಿಜಕ್ಕೂ ನಾನು ಆಘಾತಕ್ಕೊಳಗಾಗಿದ್ದೇನೆ. ಕಳೆದೊಂದು ವಾರದ ಘಟನೆಗಳು ನಿಜಕ್ಕೂ ಅಚ್ಚರಿ ಮೂಡಿಸಿದ್ದು, ನನ್ನನ್ನು ಪ್ರಕರಣದಲ್ಲಿ ಬಲಿಪಶು ಮಾಡಲಾಗಿದೆ. ಪೇಸ್ ಬುಕ್ ಮತ್ತು ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಗಳು ನನ್ನನ್ನು ದುರ್ಬಳಕೆ ಮಾಡಿಕೊಂಡಿದ್ದು, ನಾನು ನನ್ನ ಕಾರ್ಯದದಲ್ಲಿ ಯಾವುದೇ ರೀತಿಯ ದುರುದ್ದೇಶ ಹೊಂದಿರಲಿಲ್ಲ. ನಾನು ನಾವು ಮಾಡುತ್ತಿರುವ ಕೆಲಸ ಸಹಜ ಪ್ರಕ್ರಿಯೆ ಎಂದು ಭಾವಿಸಿದ್ದೆ. ಈ ಬಗ್ಗೆ ಕೇಂಬ್ರಿಡ್ಜ್ ಅನಲಿಟಿಕಾ ಕೂಡ ಸಂಪೂರ್ಣವಾಗಿ ಕಾನೂನುಬದ್ಧ ಮತ್ತು ನಿಯಮಗಳನ್ವಯ ಸೇವೆ ಎಂದು ಭರವಸೆ ನೀಡಿತ್ತು ಎಂದು ಹೇಳಿದ್ದಾರೆ.
ಇನ್ನು ಇದೇ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಮಾಡಿ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ ಸಿಬ್ಬಂದಿಯೊಬ್ಬರು, ತಮ್ಮ ಸಂಸ್ಥೆ 50 ಮಿಲಿಯನ್ ಪೇಸ್ ಬುಕ್ ಬಳಕೆದಾರರ ದತ್ತಾಂಶ ಸಂಗ್ರಹ ಮಾಡಿ ಅವರ ವರ್ತನೆಯನ್ನು ಅಧ್ಯಯನ ಮಾಡಿ, ಮತದಾರರನ್ನು ಸೆಳೆಯಲು ತಂತ್ರಗಾರಿಕೆ ರೂಪಿಸುವ ಸೇವೆ ಒದಗಿಸುವ ಕಾರ್ಯ ಮಾಡುತ್ತಿತ್ತು. ಈ ಸಂಬಂಧ ತನ್ನ ಸಂಸ್ಥೆ ಆ್ಯಪ್ ಕೂಡ ಬಿಡುಗಡೆ ಮಾಡಿ ಮತದಾರರನ್ನು ಅವರ ಇಚ್ಛಾನುಗಣಗಳಿಗೆ ತಕ್ಕಂತೆ ಸೆಳೆಯಲು ಪ್ರಯತ್ನ ಮಾಡಲಾಗುತ್ತಿತ್ತು. ತನ್ನ ಈ ಆ್ಯಪ್ ಅನ್ನು ಸುಮಾರು 270,000 ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರ ಮೂಲಕ ಅವರ ಮತ್ತ ಅವರ ಸ್ನೇಹಿತರ ದತ್ತಾಂಶಗಳನ್ನು ಸಂಗ್ರಹ ಮಾಡಲಾಗುತ್ತಿತ್ತು. ಇವೆಲ್ಲವೂ ಫೇಸ್ ಬುಕ್ ನಿಯಮಗಳ ಅಡಿಯಲ್ಲೇ ಸಾಗಿತ್ತು ಎಂದು ಹೇಳಿದ್ದಾರೆ.
ಇನ್ನು ಈ ಪ್ರಕರಣ ಸಂಬಂಧ ಕೊಗನ್ ಅವರ ವಿರುದ್ಧ ಕಿಡಿ ಕಾರಿರುವ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆ, ಕೇಂಬ್ರಿಡ್ಜ್ ವಿವಿಯ ಮನಃಶಾಸ್ತ್ರಜ್ಞರಾದ ಕೊಗನ್ ವ್ಯಕ್ತಿತ್ವ ಸಮೀಕ್ಷೆಯ ದಿ ಈಸ್ ಯುವರ್ ಲೈಫ್ ಎಂಬ ಆ್ಯಪ್ ನ ಮೂಲಕ ದತ್ತಾಂಶ ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಆರೋಪಿಸಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos