ಸಾಂದರ್ಭಿಕ ಚಿತ್ರ 
ವಿದೇಶ

ಇಂದು ವಿಶ್ವಜಲ ದಿನ: ನೀರಿನ ಅಗತ್ಯತೆ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ

ನೀರಿನ ಅಗತ್ಯತೆ ಮತ್ತು ಅದರ ಸಂರಕ್ಷಣೆ ಕುರಿತು ಜನತೆಯಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ...

ವಿಶ್ವಸಂಸ್ಥೆ : ನೀರಿನ ಅಗತ್ಯತೆ ಮತ್ತು ಅದರ ಸಂರಕ್ಷಣೆ ಕುರಿತು ಜನತೆಯಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲು ಮಾರ್ಚ್ 22ರಂದು ಪ್ರತಿವರ್ಷ ವಿಶ್ವ ಜಲ ದಿನವನ್ನು ಆಚರಿಸಲಾಗುತ್ತಿದೆ.

ದಿನಾಚರಣೆಯ ಈ ವರ್ಷದ ಘೋಷವಾಕ್ಯ: ನೀರಿಗಾಗಿ ಪ್ರಕೃತಿ-21 ನೇ ಶತಮಾನದಲ್ಲಿ ನಾವು ಎದುರಿಸುವ ನೀರಿನ ಸವಾಲುಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಅನ್ವೇಷಣೆ ಎಂಬುದಾಗಿದೆ.

ಜೀವವೈವಿಧ್ಯ ವ್ಯವಸ್ಥೆಗೆ ಧಕ್ಕೆಯುಂಟುಮಾಡಿದರೆ ಮಾನವನ ಬಳಕೆಗೆ ಉಪಯೋಗವಾಗುವ ನೀರಿನ ಗುಣಮಟ್ಟ ಮತ್ತು ಪ್ರಮಾಣಕ್ಕೆ ಹಾನಿಯುಂಟಾಗುತ್ತದೆ. ಇಂದು ವಿಶ್ವದಲ್ಲಿ 2.1 ಶತಕೋಟಿ ಜನರಿಗೆ ಕುಡಿಯಲು ಸುರಕ್ಷಿತ ನೀರು ಸಿಗುತ್ತಿಲ್ಲ. ಇದರಿಂದ ಆರೋಗ್ಯ, ಜೀವನ ಮತ್ತು ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ.

ನೀರು ಜೀವಸಂಕುಲ ಬೆಳವಣಿಗೆಯಲ್ಲಿ ಅತಿ ಅಗತ್ಯ. ಮನುಷ್ಯನ ಬಾಯಾರಿಕೆ ಮತ್ತು ಆರೋಗ್ಯವನ್ನು ರಕ್ಷಿಸುವುದಲ್ಲದೆ ಅದಕ್ಕಿಂತಲೂ ಹೆಚ್ಚಿನ ಮಹತ್ವ ನೀರಿಗಿದೆ. ನಾವು ಪ್ರವಾಹ, ಬರಗಾಲ ಮತ್ತು ನೀರಿನ ಮಾಲಿನ್ಯವನ್ನು ಹೇಗೆ ಕಡಿಮೆ ಮಾಡಬಹುದು? ಎಂದು ವಿಶ್ವಸಂಸ್ಥೆ ಕೇಳಿದೆ. ಇದಕ್ಕೆ ಪ್ರಕೃತಿಯಲ್ಲಿ ಪರಿಹಾರವಿದೆ ಎನ್ನುತ್ತದೆ ವಿಶ್ವಸಂಸ್ಥೆ.

ವಿಶ್ವ ಜಲ ದಿನವನ್ನು ಮೊದಲ ಬಾರಿಗೆ 1993ರ ಮಾರ್ಚ್ 22ರಂದು ಆರಂಭಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!