ಕಾಬುಲ್; ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸುತ್ತಿರುವ ಅಫ್ಘಾನಿಸ್ತಾನದ ಭದ್ರತಾ ಪಡೆಗಳು 24 ಗಂಟೆಗಳಲ್ಲಿ 63 ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಈ ಕುರಿತಂತೆ ಅಫ್ಘಾನಿಸ್ತಾನ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದ್ದು, ನಂಗರ್ಹಾರ್, ಉರುಜ್ಗಾನ್, ಫರಾಹ್, ಕಂದಹಾರ್ ಮತ್ತು ಪಕ್ಟಿಯಾ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, 24 ಗಂಟೆಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದ 63 ಉಗ್ರರನ್ನು ಹತ್ಯೆ ಮಾಡಿದೆ ಎಂದು ಹೇಳಿದೆ.
ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯದ ವಕ್ತಾರ ಮೊಹಮ್ಮದ್ ರದ್ಮಾನಿಶ್ ಅವರು ಹೇಳಿದ್ದಾರೆ.
ಉಗ್ರರ ಹತ್ಯೆ ಕುರಿತಂತೆ ಈ ವರೆಗೂ ಯಾವುದೇ ಉಗ್ರ ಸಂಘಟನೆಗಳು ಪ್ರತಿಕ್ರಿಯೆಗಳನ್ನು ನೀಡಿಲ್ಲ.