ಪ್ರಧಾನಿ ಮೋದಿ - ವ್ಲಾದಿಮಿರ್‌ ಪುಟಿನ್‌ 
ವಿದೇಶ

ಮೊದಲ ಅನೌಪಚಾರಿಕ ಸಭೆ, ಪ್ರಧಾನಿ ಮೋದಿ- ರಷ್ಯಾ ಅಧ್ಯಕ್ಷ ಪುಟಿನ್‌ ಭೇಟಿ

ಮೊದಲ ಅನೌಪಚಾರಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಭೇಟಿ ಮಾಡಿದ್ದು....

ಸೋಚಿ: ಮೊದಲ ಅನೌಪಚಾರಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಭೇಟಿ ಮಾಡಿದ್ದು, ಉಭಯ ದೇಶಗಳ ಬಾಂಧವ್ಯ ವೃದ್ಧಿ ಬಗ್ಗೆ ಚರ್ಚಿಸುತ್ತಿದ್ದಾರೆ.
ಸಭೆಯಲ್ಲಿ ಭಯೋತ್ಪದನಾ ನಿಗ್ರಹ, ರಕ್ಷಣಾ ಸಹಭಾಗಿತ್ವ ಹಾಗೂ ವಿವಿಧ ಯೋಜನೆಗಳಲ್ಲಿ ಆರ್ಥಿಕ ಸಹಭಾಗಿತ್ವದ ಕುರಿತು ಚರ್ಚಿಸುವ ಸಾಧ್ಯತೆ ಇದೆ. 
ಸುದೀರ್ಘ ಕಾಲದಿಂದಲೂ ಭಾರತ ಮತ್ತು ರಷ್ಯಾ ಉತ್ತಮ ಸ್ನೇಹಿತರಾಗಿದ್ದು, ಉಭಯ ದೇಶಗಳು ವಿಶೇಷ ಸವಲತ್ತುಗಳ ಪಾಲುದಾರಿಕೆಯನ್ನು ಹೆಚ್ಚಿಸಿವೆ. ರಷ್ಯಾದ ಸೋಚಿಯಲ್ಲಿ ಮೊದಲ ಅನೌಪಚಾರಿಕ ಸಭೆ ಆಹ್ವಾನಿಸಿದ್ದಕ್ಕೆ ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಎಂದು ಮೋದಿ ಹೇಳಿದ್ದಾರೆ.
ಎರಡು ದೇಶಗಳು ಪರಸ್ಪರ ವ್ಯಾಪಾರ ಸಂಬಂಧ ಹೆಚ್ಚಿಸುವ ನಿಟ್ಟಿನಲ್ಲಿ ಮಾತುಕತೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಭಾರತ - ರಷ್ಯಾ 2014 ರಿಂದ 2025ರ ವೇಳೆಗೆ ಎರಡು ರಾಷ್ಟ್ರಗಳೊಂದಿಗೆ ಮೂರು ಸಾವಿರ ಕೋಟಿ ಡಾಲರ್‌ ನಷ್ಟು ವ್ಯಾಪಾರ ವಹಿವಾಟು ನಡೆಸಲು ಗುರಿ ಇಟ್ಟುಕೊಳ್ಳಲಾಗಿದೆ. ಖಾಸಗಿ ಸಂಸ್ಥೆಯ ವರದಿಯ ಪ್ರಕಾರ 2015ರ ಬಳಿಕ ವ್ಯಾಪಾರ ವಹಿವಾಟುಗಳು ಶೇ.1.5ರಷ್ಟು ಕಡಿಮೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಸಂಬಂಧವೂ ಮಾತುಕತೆ ನಡೆಸುವ ಸಾಧ್ಯತೆಗಳಿವೆ. 
ಇದಲ್ಲದೆ ಬಾಹ್ಯಾಕಾಶ ವಿಜ್ಞಾನ, ಪರಮಾಣು ತಂತ್ರಜ್ಞಾನ ಅಭಿವೃದ್ಧಿ ಬಗ್ಗೆಯೂ ಮಾತುಕತೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ರಷ್ಯಾ ಹಾಗೂ ಭಾರತ ಸಹಯೋಗದಲ್ಲಿ ಕೂಡಂಕುಳಂ ನ್ಯೂಕ್ಲಿಯರ್‌ ಪವರ್‌ ಪ್ಲಾಂಟ್ (ಕೆಕೆಎನ್‌ಪಿಪಿ) ನಿರ್ಮಾಣವಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT