ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ನಾಯಕ ಕಿಮ್ ಜಂಗ್ ಯೂನ್ ಅವರ ಐತಿಹಾಸಿಕ ಭೇಟಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಜೂನ್ 12 ರಂದು ಉಭಯ ದೇಶಗಳ ನಡುವಿನ ಐತಿಹಾಸಿಕ ಸಭೆ ನಡೆಯಲಿದೆ ಎಂದು ರಾಜ್ಯ ಕಾರ್ಯದರ್ಶಿ ಮೈಕ್ ಪೋಂಪೆಯೊ ತಿಳಿಸಿದ್ದಾರೆ.
ಉತ್ತರ ಕೊರಿಯಾ ಪರಮಾಣು ಪರೀಕ್ಷೆ ಸ್ಥಗಿತಗೊಳಿಸಿರುವುದು ಟ್ರಂಪ್ ಆಡಳಿತದ ರಾಷ್ಟ್ರೀಯ ಭದ್ರತಾ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪೊಂಪೆಯೋ ಹೇಳಿದ್ದಾರೆ.