ಫ್ಲೋರಿಡಾ ಯೋಗ ಸ್ಟುಡಿಯೋದಲ್ಲಿ ಗುಂಡಿನ ದಾಳಿ: 3 ಸಾವು, ಹಲವರಿಗೆ ಗಾಯ 
ವಿದೇಶ

ಫ್ಲೋರಿಡಾ ಯೋಗ ಸ್ಟುಡಿಯೋದಲ್ಲಿ ಗುಂಡಿನ ದಾಳಿ: 3 ಸಾವು, ಹಲವರಿಗೆ ಗಾಯ

ಫ್ಲೋರಿಡಾ ರಾಜಧಾನಿ ತಲಹಸ್ಸೀಯಲ್ಲಿನ ಯೋಗಾ ಸ್ಟುಡಿಯೋದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ತಲಹಸ್ಸೀ: ಫ್ಲೋರಿಡಾ ರಾಜಧಾನಿ ತಲಹಸ್ಸೀಯಲ್ಲಿನ ಯೋಗಾ ಸ್ಟುಡಿಯೋದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 
ಸ್ಥಳೀಯ ಕಾಲಮಾನದ ಪ್ರಕಾರ ಶುಕ್ರವಾರ ರಾತ್ರಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೊಬ್ಬ ಈ ದಾಳಿಯನ್ನು ನಡೆಸಿದ್ದು, ದಾಳಿಯ ಉದ್ದೇಶಗಳು ಈವರೆಗೂ ತಿಳಿದುಬಂದಿದೆ. 
ವ್ಯಕ್ತಿ ಗುಂಡು ಹಾರಿಸಲು ಆರಂಭಿಸುತ್ತಿದ್ದಂತೆಯೇ ಕೆಲವರು ತುರ್ತು ಸೇನೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆಯೇ ವ್ಯಕ್ತಿ ಗುಂಡು ಹಾರಿಸಿಕೊಕಂಡು ತಾನೂ ಕೂಡ ಮೃತನಾಗಿದ್ದಾನೆ. 
ವ್ಯಕ್ತಿ ಗುಂಡಿನ ದಾಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲವರು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೆ ಕೆಲವರು ತಾವು ಗಾಯಗೊಂಡಿದ್ದರು, ಮತ್ತಷ್ಟು ಜನರನ್ನು ರಕ್ಷಣೆ ಮಾಡಲು ಯತ್ನಿಸುತ್ತಿದ್ದರು. ದಾಳಿ ನಡೆಸಿದ ವ್ಯಕ್ತಿ ಸ್ಟುಡಿಯೋ ಒಳಗೆ ಹಾಗೂ ಹೊರಗೆ ಓಡಾಡುತ್ತಲೇ ಇದ್ದ. ಗನ್'ಗೆ ಬುಲೆಟ್ ಗಳನ್ನು ಹಾಕುತ್ತಿದ್ದುದ್ದನ್ನು ನೋಡಿದ ಕೆಲವರು ಸ್ಟುಡಿಯೋ ಕಿಟಕಿಯಿಂದಲ್ ಜನರಿಗೆ ಎಚ್ಚರಿಕೆ ನೀಡಲು ಆರಂಭಿಸಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 
ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲು ಮಾಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video