ಮೆಲ್ಬೋರ್ನ್: ಆಸ್ಟ್ರೇಲಿಯಾದ ಮೆಲ್ಬೋರ್ನ್ ಕೇಂದ್ರೀಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನಬಂದಂತೆ ಚೂರಿಯಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಸ್ಥಳೀಯ ಕಾಲಮಾನದ ಪ್ರಕಾರ 4.20ರ ಸುಮಾರಿಗೆ ಬರ್ಕ್ ಸ್ಟ್ರೀಟ್ ಮಾಲ್ ಬಳಿ ಘಟನೆ ನಡೆದಿದೆ. ವ್ಯಕ್ತಿ ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ದುಷ್ಕರ್ಮಿ ಮೇಲೆ ಗುಂಡಿನ ದಾಳಿ ನಡೆಸಿ ಬಂಧನಕ್ಕೊಳಪಡಿಸಿದ್ದಾರೆ.
ಚೂರಿಯಿಂದ ಇರಿದ ವ್ಯಕ್ತಿ ಚಾಲಕನೆಂದು ಹೇಳಲಾಗುತ್ತಿದ್ದು, ಪ್ರಸ್ತುತ ಆತನ ಸ್ಥಿತಿ ಕೂಡ ಚಿಂತಾಜನಕವಾಗಿದೆ. ದುಷ್ಕರ್ಮಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಘಟನೆ ವೇಳೆ ದುಷ್ಕರ್ಮಿಯ ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಾಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics