ಇಮ್ರಾನ್ ಖಾನ್ 
ವಿದೇಶ

ಅಮೆರಿಕಾದೊಂದಿಗೆ ಉಗ್ರರ ವಿರೋಧಿ ಹೋರಾಟಕ್ಕೆ ಕೈ ಜೋಡಿಸಿದ್ದಕ್ಕೆ ನಮಗೇ ನಷ್ಟವಾಗಿದೆ: ಇಮ್ರಾನ್ ಖಾನ್

ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಿಲ್ಲ, ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಗೆ ಯಾವುದೇ ಸಹಕಾರವನ್ನೂ ನೀಡಿಲ್ಲ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಕ್ಕೆ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಿಲ್ಲ, ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಗೆ ಯಾವುದೇ ಸಹಕಾರವನ್ನೂ ನೀಡಿಲ್ಲ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 
ಅಮೆರಿಕ ಅಫ್ಘಾನಿಸ್ತಾನದಲ್ಲಿ ತನ್ನ ವೈಫಲ್ಯಕ್ಕೆ ಪಾಕಿಸ್ತಾನವನ್ನು ಬಲಿಪಶು ಮಾಡುವ ಬದಲು, ತಾಲಿಬಾನ್ ಹಿಂದೆಂದಿಗಿಂತಲೂ ಏಕೆ ಬಲಿಷ್ಠವಾಗಿದೆ ಎಂಬುದನ್ನು ಅಮೆರಿಕ ಅರಿಯಬೇಕಾಗಿದೆ ಎಂದು ಹೇಳಿದ್ದಾರೆ.  ಪಾಕಿಸ್ತಾನಕ್ಕೆ ಅಮೆರಿಕದಿಂದ ಸಿಗುತ್ತಿದ್ದ ಆರ್ಥಿಕ ನೆರವಿಗೆ ಕಡಿವಾಣ ಹಾಕಿರುವ ಕ್ರಮವನ್ನು ಸಮರ್ಥನೆ ಮಾಡಿಕೊಂಡು ಟ್ರಂಪ್ ಟ್ವೀಟ್ ಮಾಡಿದ ಬೆನ್ನಲ್ಲೆ ಇಮ್ರಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಪಾಕ್ ವಿರುದ್ಧ ಟ್ರಂಪ್ ಆರೋಪಗಳಿಗೆ ನೇರವಾಗಿ ದಾಖಲೆಗಳನ್ನು ನೀಡಬೇಕಿದೆ.  9/11 ದಾಳಿಯಲ್ಲಿ ಯಾವುದೇ ಪಾಕಿಸ್ತಾನಿಯೂ ಇಲ್ಲದೇ ಇದ್ದರೂ ಸಹ ಅಮೆರಿಕ ಭಯೋತ್ಪಾದನೆ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ಪಾಕ್ ಸಹ ಕೈ ಜೋಡಿಸಲು ನಿರ್ಧರಿಸಿತ್ತು. ಈ ಹಂತದಲ್ಲಿ ಪಾಕಿಸ್ತಾನ ಸಹ 75,000 ಸಾವು-ನೋವುಗಳನ್ನು ಕಂಡಿದ್ದು, 123 ಬಿಲಿಯನ್ ಡಾಲರ್ ನಷ್ಟು ಹಣವನ್ನೂ ಕಳೆದುಕೊಂಡಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 
ಅಮೆರಿಕಾ ಉಗ್ರ ವಿರೋಧಿ ಯುದ್ಧದಿಂದಾಗಿ ಪಾಕಿಸ್ತಾನಕ್ಕೆ ಆರ್ಥಿಕವಾಗಿ ನಷ್ಟವಾಗುವುದಷ್ಟೇ ಅಲ್ಲದೇ ಪಾಕಿಸ್ತಾನದ ಬುಡಕಟ್ಟು ಪ್ರದೇಶಗಳಿಗೂ ಹಾನಿಯುಂಟಾಗಿದೆ. ಇದರಿಂದಾಗಿ ಸಾಮಾನ್ಯ ಪಾಕಿಸ್ತಾನಿಯರ ಜೀವನಕ್ಕೂ ಸಾಕಷ್ಟು ಹಾನಿಯಾಗಿದೆ ಎಂದು ಇಮ್ರಾನ್ ಖಾನ್ ಅಮೆರಿಕ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿದ್ದು, ಇಷ್ಟೆಲ್ಲಾ ತ್ಯಾಗ ಮಾಡಿರುವ ಮತ್ತೊಂದು ಮಿತ್ರ ರಾಷ್ಟ್ರದ ಹೆಸರನ್ನು ಉಲ್ಲೇಖಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಸಾಧ್ಯವೇ ಎಂದು ಇಮ್ರಾನ್ ಖಾನ್ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?

1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಟ!