ಸಂಗ್ರಹ ಚಿತ್ರ 
ವಿದೇಶ

ಗಾಯದ ಮೇಲೆ ಬರೆ: ಪಾಕ್‌ಗೆ 1.66 ಬಿಲಿಯನ್ ಡಾಲರ್ ಅಮೆರಿಕ ಭದ್ರತಾ ನೆರವು ಸ್ಥಗಿತ

ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ಅಮೆರಿಕ ಸರ್ಕಾರ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕ ಸರ್ಕಾರ ಸ್ಥಗಿತಗೊಳಿಸಿದೆ.

ವಾಷಿಂಗ್ಟನ್: ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ಅಮೆರಿಕ ಸರ್ಕಾರ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕ ಸರ್ಕಾರ ಸ್ಥಗಿತಗೊಳಿಸಿದೆ.
ಪ್ರತೀ ವರ್ಷ ಅಮೆರಿಕ ಸರ್ಕಾರ ಪಾಕಿಸ್ತಾನಕ್ಕೆ ನೀಡುತ್ತಿದ್ದ ಸಮಾರು 1.66 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ನೆರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮರಿಕ ರಕ್ಷಣಾ ಇಲಾಖೆ ವಕ್ತಾರ ಕರ್ನಲ್ ರಾಬ್ ಮ್ಯಾನಿಂಗ್ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶದಂತೆ ಪಾಕ್ ಗೆ ನೀಡುತ್ತಿದ್ದ ಭದ್ರತಾ ನೆರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಪಾಕಿಸ್ತಾನ ಸರ್ಕಾರ ಉಗ್ರರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಅಮೆರಿಕ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಈ ವೇಳೆ ಅಮೆರಿಕ ಸರ್ಕಾರ ಪಾಕಿಸ್ತಾನ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.  ಕಾಂಗ್ರೆಸ್‌ ನಿರ್ದೇಶನದ ಮೇರೆಗೆ 2016ರಲ್ಲಿ ವಿದೇಶಿ ಸೇನಾ ನಿಧಿ (ಎಫ್‌ಎಂಎಫ್‌) ಅಡಿ ನೀಡಿರುವ ಸುಮಾರು 1.66 ಬಿಲಿಯನ್ ಡಾಲರ್ ಮೊತ್ತದ ಭದ್ರತಾ ನೆರವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ಇನ್ನು ಇದೇ ವಿಚಾರವಾಗಿ ಮಾತನಾಡಿರುವ ಆಫ್ಘಾನಿಸ್ತಾನದಲ್ಲಿ ಅಮೆರಿಕ ರಕ್ಷಣಾ ಇಲಾಖೆಯ ಸಹಾಯಕ ಕಾರ್ಯದರ್ಶಿಯಾಗಿರುವ ಡೇವಿಡ್ ಸಿಡ್ನಿ ಅವರು, ಒಬಾಮ ಅವರ ಸರ್ಕಾರದ ಅವಧಿಯಲ್ಲೇ ಪಾಕಿಸ್ತಾನ ಮತ್ತು ಕೇಂದ್ರೀಯ ಏಷ್ಯಾದಲ್ಲಿನ ಉಗ್ರರ ಚಟುವಟಿಕೆಗಳನ್ನು ನಿಯಂತ್ರಿಸುವಂತೆ ಪಾಕ್ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಆದರೆ ಈ ವರೆಗೂ ಪಾಕ್ ಸರ್ಕಾರ ಈ ಬಗ್ಗೆ ನಿರ್ಣಾಯಕ ಕ್ರಮ ಕೈಗೊಂಡಿಲ್ಲ.  ಅಂದು ಪಾಕ್ ಸರ್ಕಾರ ತಮಗೆ ಮಾತು ನೀಡಿತ್ತಾದರೂ, ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ. ಹೀಗಾಗಿ ಭದ್ರತಾ ನೆರವನ್ನು ಕಡಿತಗೊಳಿಸಲಾಗಿದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಬ್ರಿಕ್ಸ್‌ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಪ್ರಿಯಕರನ ಜೊತೆ ಓಡಿಹೋದ ಪತ್ನಿ; ಪತ್ತೆಹಚ್ಚಿ ಮಾಜಿ ಪ್ರೇಮಿಯೊಂದಿಗೇ ಮದುವೆ ಮಾಡಿಸಿದ ಜವಾನ!

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!

ಭಯೋತ್ಪಾದಕರಿಗೆ ನೆರವು: ಮೋಸ್ಟ್ ವಾಂಟೆಡ್ ಹಫೀಜ್ ಸಯೀದ್ ವಿರುದ್ಧ 2ನೇ ಬಾರಿಗೆ 'ಜಾಮೀನು ರಹಿತ ವಾರೆಂಟ್' ಹೊರಡಿಸಿದ NIA ನ್ಯಾಯಾಲಯ!