ಬೀಜಿಂಗ್: ಈಶಾನ್ಯ ಚೀನಾದಲ್ಲಿ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿಯೇ ರಸ್ತೆ ದಾಟುತ್ತಿದ್ದ ಶಾಲಾ ಮಕ್ಕಳ ಗುಂಪಿನ ಮೇಲೆ ಕಾರು ನುಗ್ಗಿಸಿದ್ದು, ಭಯಾನಕ ಘಟನೆಯಲ್ಲಿ ಐವರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು 19 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಿಯಾನಿಂಗ್ ಪ್ರಾಂತ್ಯದ ಹುಲುಡಾವೊದಲ್ಲಿ ಈ ದುರಂತ ನಡೆದಿದ್ದು, ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರು ನುಗ್ಗಿಸಿದ ವ್ಯಕ್ತಿಯನ್ನು 29 ವರ್ಷದ ಹನ್ ಎಂದು ಗುರುತಿಸಲಾಗಿದೆ.
ಶಾಲೆಯೊಂದರ ಮುಂಭಾಗದಲ್ಲಿ ಮಕ್ಕಳು ರಸ್ತೆ ದಾಟುತ್ತಿದ್ದರು. ಈ ವೇಳೆ ಅತಿ ವೇಗದಲ್ಲಿ ಬಂದ ಹನ್ ಕಾರು ಮಕ್ಕಳ ಮೇಲೆಯೇ ಹರಿದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಲವು ಮಕ್ಕಳು ಹಲವು ಅಡಿಗಳಷ್ಟು ದೂರ ಹಾರಿ ಬಿದ್ದರೆ, ಇನ್ನು ಕೆಲವರು ಚಕ್ರದ ಅಡಿ ಸಿಲುಕಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರು ಚಾಲಕ ಹನ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತ ಒಬ್ಬ ನಿರುದ್ಯೋಗಿಯಾಗಿದ್ದು, ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics