ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ 
ವಿದೇಶ

26/11 ಮುಂಬೈ ದಾಳಿ ಸಂಚುಕೋರರ ಬಗ್ಗೆ ಮಾಹಿತಿಗೆ 5 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಅಮೆರಿಕಾ

2008 ನವೆಂಬರ್ 26 ರಂದು ನಡೆದಿದ್ದ ಮುಂಬೈ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 5 ಮಿಲಿಯನ್ ಡಾಲರ್ ಬಹುಮಾನವನ್ನು ಅಮೆರಿಕ ಘೋಷಿಸಿದೆ.

ವಾಷಿಂಗ್ಟನ್: 2008 ನವೆಂಬರ್ 26 ರಂದು ನಡೆದಿದ್ದ ಮುಂಬೈ ಉಗ್ರರ ದಾಳಿಯ ಸಂಚಿನ ಬಗ್ಗೆ ಮಾಹಿತಿ ನೀಡುವವರಿಗೆ 5 ಮಿಲಿಯನ್  ಡಾಲರ್ ಬಹುಮಾನವನ್ನು ಅಮೆರಿಕ ಘೋಷಿಸಿದೆ.

ಭಾರತದ ವಾಣಿಜ್ಯ ನಗರಿ ಮುಂಬೈ ಮೇಲೆ  ದಾಳಿ ನಡೆದು ಇಂದಿಗೆ 10 ವರ್ಷ ಆಗುತ್ತಿರುವ ಸಂದರ್ಭದಲ್ಲಿ ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರ  ದಾಳಿ ನಡೆಸಿದ ದುಷ್ಕರ್ಮಿಗಳ ಬಗ್ಗೆ ಮಾಹಿತಿ ನೀಡುವವರಿಗೆ 35 ಕೋಟಿ ರೂಪಾಯಿಗಳ ಬಹುಮಾನವನ್ನು ಘೋಷಿಸಿದೆ. ಈ ದಾಳಿ ವೇಳೆಯಲ್ಲಿ  ಅಮೆರಿಕಾದ ನಾಲ್ಕು ಜನರು ಸೇರಿದಂತೆ ಒಟ್ಟಾರೇ 166 ಮಂದಿ ಮೃತಪಟ್ಟಿದ್ದರು.

ಮುಂಬೈ ದಾಳಿ ನಡೆದ 10 ವರ್ಷ ಆಗಿದ್ದರೂ ದುಷ್ಕರ್ಮಿಗಳಿಗೆ ಶಿಕ್ಷೆಯಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಸಿಂಗಾಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷ ಮೆಕ್ ಪೆನ್ಸಿ ಜೊತೆಗಿನ ಮಾತುಕತೆ ವೇಳೆಯಲ್ಲಿ ಪ್ರಸ್ತಾಪಿಸಿದ್ದರು.

ಈ ಮಾತುಕತೆ ನಡೆದ 15 ದಿನಗಳ ನಂತರ ಅಮೆರಿಕಾ ಸರ್ಕಾರ ಬಹುಮಾನದ ಘೋಷಣೆ ಮಾಡಿದೆ.ಎಲ್ ಇಟಿ ಉಗ್ರ ಸಂಘಟನೆಯ ಹಂತಕರು 2008, ನವೆಂಬರ್ 26 ರಿಂದ 29ರವರೆಗೂ ಮುಂಬೈ ನಗರ ಗುರಿಯಾಗಿಸಿಕೊಂಡು ಸರಣಿ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT