ಅಮೆರಿಕ ಚುನವಾಣೆಯಲ್ಲಿ ಚೀನಾ ಹಸ್ತಕ್ಷೇಪ ಮಾಡಿದೆ: ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆ 
ವಿದೇಶ

ಅಮೆರಿಕ ಚುನವಾಣೆಯಲ್ಲಿ ಚೀನಾ ಹಸ್ತಕ್ಷೇಪ ಮಾಡಿದೆ: ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆ

ಚೀನಾ ಅಮೆರಿಕಾಗೆ ಸೆಡ್ಡು ಹೊಡೆದು ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರದ ಪಟ್ಟ ಕಸಿದುಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವಂಥಹದ್ದೇ. ಆದರೆ....

ನ್ಯೂಯಾರ್ಕ್: ಚೀನಾ ಅಮೆರಿಕಾಗೆ ಸೆಡ್ಡು ಹೊಡೆದು ವಿಶ್ವದ ಅತ್ಯಂತ ಬಲಿಷ್ಠ ರಾಷ್ಟ್ರದ ಪಟ್ಟ ಕಸಿದುಕೊಳ್ಳುವುದಕ್ಕೆ ಯತ್ನಿಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿರುವಂಥಹದ್ದೇ. ಆದರೆ ಚೀನಾ ಅಮೆರಿಕಾ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವಷ್ಟು ಬಲಿಷ್ಠರಾಷ್ಟ್ರವಾ? ಎಂಬ ಪ್ರಶ್ನೆಯನ್ನು ಮೂಡುವಂತೆ ಮಾಡಿದೆ ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನೀಡಿರುವ ಹೇಳಿಕೆ.  
ಈ ವರೆಗೂ 2016 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಮಾಡಿತ್ತು ಎಂಬ ಆರೋಪದ ಬಗ್ಗೆಯಷ್ಟೇ ಅರಿವಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಜೊತೆಗೆ ಈಗ ಚೀನಾ ಸಹ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿತ್ತು ಎಂದು ಆರೋಪಿಸಿದ್ದಾರೆ. 
ಚೀನಾಗೆ ನಾನು ಅಮೆರಿಕ ಅಧ್ಯಕ್ಷನಾಗಿರುವುದು ಬೇಕಿಲ್ಲ. ಆದ್ದರಿಂದ ಚೀನಾ ಈ ಹಿಂದಿನ ಚುನಾವಣೆಯಲ್ಲಿಯೂ ಹಸ್ತಕ್ಷೇಪ ಮಾಡಿತ್ತು. ಈಗ 2018 ರ ಮಧ್ಯಂತರ ಚುನಾವಣೆಗಳಲ್ಲಿಯೂ ಚೀನಾ ಹಸ್ತಕ್ಷೇಪ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ 2016 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಹಸ್ತಕ್ಷೇಪದ ಪಾತ್ರವನ್ನು ಟ್ರಂಪ್ ಬಹಿರಂಗಪಡಿಸಿದ್ದಾರೆ. ಕಳೆದ ತಿಂಗಳು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದ ಟ್ರಂಪ್ 2018 ರ ಅಮೆರಿಕ ಮಧ್ಯಂತರ ಚುನಾವಣೆಗಳಲ್ಲಿ ಚೀನಾ ಮಧ್ಯಪ್ರವೇಶಿಸಲು ಯತ್ನಿಸುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದರು. 
ಇದಾದ ಬಳಿಕ ಅಮೆರಿಕದ ಪ್ರಸಿದ್ಧಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿರುವ ಟ್ರಂಪ್, ರಷ್ಯ ಮಾತ್ರವೇ ಅಮೆರಿಕ ಚುನವಾಣೆಯಲ್ಲಿ ಮಧ್ಯಪ್ರವೇಶ ಮಾಡಿತ್ತು ಎಂದುಕೊಂಡಿದ್ದೆವು. ಆದರೆ ಚೀನಾ ಸಹ ಹಸ್ತಕ್ಷೇಪ ಮಾಡಿದೆ ಎಂದು ಟ್ರಂಪ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT