ಬ್ರಿಟನ್: ಭಯೋತ್ಪಾದನೆಯನ್ನು ಪಾಕಿಸ್ತಾನ ನಿರ್ನಾಮಗೊಳಿಸಿದೆ. ಇದಕ್ಕಾಗಿ ಜಗತ್ತು ನಮ್ಮನ್ನು ಅಭಿನಂದಿಸಬೇಕು ಎಂದು ಪಾಕಿಸ್ತಾನ ಸೇನೆಯ ವಕ್ತಾರರು ಹೇಳಿದ್ದಾರೆ.
ಬ್ರಿನಟ್ ನಲ್ಲಿ ಮಾತನಾಡಿರುವ ಪಾಕಿಸ್ತಾನ ಸೇನೆಯ ವಕ್ತಾರ, ಪಾಕಿಸ್ತಾನ ಭಯೋತ್ಪಾದನೆಯನ್ನು ಕೊನೆಗಾಣಿಸಲು ಸಾಕಷ್ಟು ಶ್ರಮಿಸುತ್ತಿದೆ. ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಹೋರಾಡುತ್ತಿದ್ದು, ಪಾಕಿಸ್ತಾನದ ಶ್ರಮಕ್ಕೆ ಜಗತ್ತು ಮೆಚ್ಚುಗೆ ವ್ಯಕ್ತಪಡಿಸಬೇಕೆಂದು ಐಎಸ್ ಪಿಆರ್ ನ ಮೇಜರ್ ಜನರಲ್ ಆಸೀಫ್ ಘಫೂರ್ ಹೇಳಿದ್ದಾರೆ.
ವಾರ್ವಿಕ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಐಎಸ್ ಪಿಆರ್ ನ ಮುಖ್ಯಸ್ಥರಾದ ಮೇಜರ್ ಅಸೀಫ್ ಘಫೂರ್, ವಿಶ್ವ ಹಾಗೂ ದಕ್ಷಿಣ ಏಷ್ಯಾದಲ್ಲಿ ಶಾಂತಿ ಹಾಗೂ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ಪಾಕಿಸ್ತಾನ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಜಗತ್ತು ನಮ್ಮನ್ನು ಅಭಿನಂದಿಸಬೇಕು ಎಂದಿದ್ದಾರೆ.