ವಿದೇಶ

ಲಂಕಾ ರಾಜಕೀಯ ಬಿಕ್ಕಟ್ಟು: ಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ, ಮೂವರಿಗೆ ಗಾಯ

Lingaraj Badiger
ಕೊಲಂಬೊ: ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಭಾನುವಾರ ಒತ್ತೆಯಾಳಾಗಿಸಲು ಯತ್ನಿಸಿದಾಗ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಅರ್ಜುನ ರಣತುಂಗ ಅವರು ಇಂದು ಸೆಲಾನ್ ಪೆಟ್ರೋಲಿಯಂ ಕಾರ್ಪೋರೇಷನ್ ನಲ್ಲಿರುವ ತಮ್ಮ ಕಚೇರಿಗೆ ತೆರಳುವ ವೇಳೆ ಜನರ ಗುಂಪೊಂದು ಅವರನ್ನು ಒತ್ತೆಯಾಳಾಗಿಸಲು ಯತ್ನಿಸಿದ್ದು, ಈ ವೇಳೆ ಅವರ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಅವರು ತಿಳಿಸಿದ್ದಾರೆ.
ಕಳೆದ ಶುಕ್ರವಾರ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ್ ಸಿರಿಸೇನಾ ಅವರು ಪ್ರಧಾನಿ ರಾನಿಲ್​ ವಿಕ್ರಮಸಿಂಘೆ ಅವರನ್ನು ಉಚ್ಚಾಟಿಸಿ, ಮಹಿಂದ ರಾಜಪಕ್ಸ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದಾರೆ.
ಅಧ್ಯಕ್ಷ ಸಿರಿಸೇನಾ ಅವರ ನಿರ್ಧಾರ ಅಕ್ರಮ ಮತ್ತು ಅಸಂವಿಧಾನಿಕ ಎಂದಿರುವ ವಿಕ್ರಮಸಿಂಘೆ ಅವರು, ತಾವು ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
SCROLL FOR NEXT