189 ಪ್ರಯಾಣಿಕರಿದ್ದ ಜಕಾರ್ತ ಲಯನ್ ಏರ್'ಲೈನ್ಸ್ ವಿಮಾನ ಸಮುದ್ರದಲ್ಲಿ ಪತನ 
ವಿದೇಶ

189 ಪ್ರಯಾಣಿಕರಿದ್ದ ಜಕಾರ್ತ ಲಯನ್ ಏರ್'ಲೈನ್ಸ್ ವಿಮಾನ ಸಮುದ್ರದಲ್ಲಿ ಪತನ

189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್'ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಜಕಾರ್ತ: 189 ಮಂದಿ ಪ್ರಯಾಣಿಕರಿದ್ದ ಇಂಡೋನೇಷ್ಯಾ ಲಯನ್ ಏರ್'ಲೈನ್ಸ್ ಪ್ರಯಾಣಿಕ ವಿಮಾನ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ಸೋಮವಾರ ನಡೆದಿದೆ. 
ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ ಪಾಂಗ್ ಕಲ್ ಪಿನಾಗ್ ದ್ವೀಪಕ್ಕೆ ವಿಮಾನ ಇಂದು ಬೆಳಿಗ್ಗೆ ಹೊರಟಿತ್ತು. ಟೇಕ್ ಆಫ್ ಆದ 13 ನಿಮಿಷಗಳ ಬಳಿಕ ವಿಮಾನ ನಾಪತ್ತೆಯಾಗಿರುವುದಾಗಿ ಹೇಳಿದ್ದರು. 7.30ರ ವೇಳೆ ದ್ವೀಪದಲ್ಲಿ ವಿಮಾನ ಇಳಿಯಬೇಕಿತ್ತು. ಆದರೆ, ವಿಮಾನ ಜಾವಾ ಸಮುದ್ರದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಸುಮಾರು 210 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವನ್ನು ಈ ವಿಮಾನ ಹೊಂದಿತ್ತು. ದುರಂತದ ವೇಳೆ ವಿಮಾನದಲ್ಲಿ 189 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರಿಗಾಗಿ ಶೋಧ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. 
ಸುಮಾತ್ರ ದ್ವೀಪದಿಂದ ದೂರ ತೀರದಲ್ಲಿರುವ ಪ್ಯಾಂಕಾಲ್ ಪಿನಾಂಗ್ ನಗರಕ್ಕೆ ಜಕಾರ್ತದಿಂದ ಹೊರಟಿದ್ದ ವಿಮಾನವು ಸಮುದ್ರದಲ್ಲಿ ಪತನಗೊಂಡ ವಿದ್ಯಾಮಾನವನ್ನು ಇಂಡೋನೇಷ್ಯಾದ ಶೋಧ ಮತ್ತು ರಕ್ಷಣಾ ಸಂಸ್ಥೆ ದೃಢಪಡಿಸಿದೆ. 
ಸಮುದ್ರದ ಬಳಿಯಿರುವ ತೈಲ ಸಂಸ್ಕರಣಾ ಘಟಕದ ಅಸುಪಾಸಿನಲ್ಲಿ ವಿಮಾನದ ಆಸನಗಳ ಸಹಿತ ವಿವಿಧ ಬಗೆಯ ಅವಶೇಷಗಳು ತೇಲುತ್ತಿರುವುದು ಕಂಡು ಬಂದಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT