ಕೊಲಂಬೊ: ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿರುವಂತೆ ನಿನ್ನೆ ಸಂಭವಿಸಿದ ಹಿಂಸಾಚಾರದಲ್ಲಿ ರಾಜಪಕ್ಸ ಬೆಂಬಲಿಗರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕ್ರಿಕೆಟ್ ಲೆಜೆಂಡ್ ಹಾಗೂ ಪೆಟ್ರೋಲಿಯಂ ಖಾತೆ ಸಚಿವ ಅರ್ಜುನ ರಣತುಂಗಾ ಅವರನ್ನು ಇಂದು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಡೆಮಟಾಗೊಡಾದ ಸಿಲೊನ್ ಪೆಟ್ರೋಲಿಯಂ ಕಾರ್ಪೋರೇಷನ್ ಆವರಣದ ಬಳಿ ಪರಿಸ್ಥಿತಿ ಉದ್ವಿಗ್ನ ಗೊಂಡು ರಾನಿಲ್ ವಿಕ್ರಮ್ ಸಿಂಘೆ ಆಪ್ತ 54 ವರ್ಷದ ರಣತುಂಗಾ ಅವರ ಅಂಗರಕ್ಷಕರು ಮಹಿಂದಾ ರಾಜಪಕ್ಸ ಅವರ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಗುಂಡಿನ ದಾಳಿಯಿಂದಾಗಿ ಒಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.