ಬಂಧಿತ ಪತ್ರಕರ್ತರು 
ವಿದೇಶ

ಮಯನ್ಮಾರ್: ರಹಸ್ಯ ದಾಖಲೆ ಹೊಂದಿದ್ದ ಆರೋಪ, ರಾಯಿಟರ್ಸ್ ನ 2 ಪತ್ರಕರ್ತರಿಗೆ 7 ವರ್ಷ ಜೈಲು!

ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಯಂಗೋನ್: ರೊಹಿಂಗ್ಯನ್ನರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಹಸ್ಯ ಕಾರ್ಯಾಚರಣೆ ನಡೆಸಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಇಬ್ಬರು ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ಡಿಸೆಂಬರ್ ನಲ್ಲಿ ನಡೆದಿದ್ದ ರೊಹಿಂಗ್ಯಾ ಕಗ್ಗೊಲೆ ಪ್ರಕರಣದ ವರದಿ ಮಾಡಿದ್ದ ವಾ ಲೋನ್ ಮತ್ತು ಕ್ಯಾ ಸೂ ಓ ಪತ್ರಕರ್ತರಿಗೆ ಮಯನ್ಮಾರ್ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಬ್ಬರೂ ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ದಾಖಲೆ ರಕ್ಷಣೆ ಕಾಯ್ದೆಯಡಿ ದೂರು ದಾಖಲಾಗಿತ್ತು.
ಇನ್ನು ಪತ್ರಿಕಾ ಸ್ವಾತಂತ್ರ್ಯ ಹಾಗೂ ಮಾನವ ಹಕ್ಕುಗಳ ಸಂಘಟನೆಯ ಕಾರ್ಯಕರ್ತರು ಪತ್ರಕರ್ತರ ಬಂಧನಕ್ಕೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಹಲವಾರು ದೇಶಗಳಲ್ಲಿ ಪ್ರತಿಭಟನೆ ಸಹ ನಡೆದಿತ್ತು.
ಏನಿದು ಘಟನೆ?
ಕಳೆದ ಡಿಸೆಂಬರ್​ನಲ್ಲಿ ಮಯನ್ಮಾರ್​ನ ರಖಿನೇ ರಾಜ್ಯದಲ್ಲಿ ಸುಮಾರು ನೂರು ಮಂದಿ ರೋಹಿಂಗ್ಯಾ ಮುಸ್ಲಿಮರ ಕಗ್ಗೊಲೆ ನಡೆದಿತ್ತು. ಈ ವೇಳೆ ಪುರುಷರು, ಮಹಿಳೆಯರು ಹಾಗೂ ಸಾಕಷ್ಟು ಮಂದಿ ಬಾಲಕರು ಸಾವನ್ನಪ್ಪಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್​ನ ಈ ಇಬ್ಬರು ಪತ್ರಕರ್ತರು ತನಿಖಾ ಪತ್ರಿಕೋದ್ಯಮ ಆರಂಭಿಸಿದ್ದರು. ಈ ವೇಳೆ ಮಯನ್ಮಾರ್ ಮಿಲಿಟರಿ ಶಿಸ್ತುಕ್ರಮದ ಸಮಯದಲ್ಲಿ ಈ ಕೊಲೆಗಳು ನಡೆದಿದ್ದವು ಎಂದು ವರದಿ ನೀಡಿದ್ದರು. 
ಈ ಸಂಬಂಧ ತನಿಖೆ ನಡೆಸಿದ್ದ ಮಯನ್ಮಾರ್ ಪೊಲೀಸರು ರೆಸ್ಟೊರೆಂಟ್ ಒಂದರಲ್ಲಿ ಕೆಲವು ರಹಸ್ಯ ಪೇಪರ್ ಗಳನ್ನು ನೀಡಿದ ಸಂದರ್ಭದಲ್ಲಿ ಬಂಧಿಸಿದ್ದರು. ಈ ವೇಳೆ ಇಬ್ಬರು ಪತ್ರಕರ್ತರ ವಿರುದ್ಧ ಅಧಿಕೃತ ರಹಸ್ಯ ಮಾಹಿತಿ ರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ತನ್ನ ತೀರ್ಪು ನೀಡಿದ್ದು, ಅನಧಿಕೃತವಾಗಿ ತನಿಖೆ ನಡೆಸಿ ಗೌಪ್ಯ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ ಎಂದು ಹೇಳಿದೆ. ಅಲ್ಲದೆ ಇಬ್ಬರೂ ಪತ್ರಕರ್ತರಿಗೂ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT