ಸಾಂದರ್ಭಿಕ ಚಿತ್ರ 
ವಿದೇಶ

ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಚೀನಾ ಅಡ್ಡಗಾಲು: ಅಮೆರಿಕ

ಭಾರತ ಪರಮಾಣು ಪೂರೈಕೆದಾರ ಸಮೂಹ(ಎನ್ ಎಸ್ ಜಿ) ಸೇರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ...

ವಾಷಿಂಗ್ಟನ್‌: ಭಾರತ ಪರಮಾಣು ಪೂರೈಕೆದಾರ ಸಮೂಹ(ಎನ್ ಎಸ್ ಜಿ) ಸೇರುವುದಕ್ಕೆ  ಚೀನಾ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಗುರುವಾರ ಅಮೆರಿಕ ಹೇಳಿದೆ.
ಚೀನಾ ವಿರೋಧದಿಂದಾಗಿ ಭಾರತ ಎನ್ ಎಸ್ ಜಿ ಸದಸ್ಯತ್ವ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಡೊನಾಲ್ಡ್‌ ಟ್ರಂಪ್‌ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅಲ್ಲದೆ ಭಾರತ ಎನ್ ಎಸ್ ಜಿ ಸದಸ್ಯತ್ವ ಪಡೆಯಲು ಅಮೆರಿಕದ ಬೆಂಬಲ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ವಿಚಾರದಲ್ಲಿ ಚೀನಾ ತನ್ನ ಹಠಕ್ಕೆ ಬದ್ಧವಾಗಿ ನಿಂತಿದೆ. ಹಾಗೆಂದು ನಾವು ಭಾರತಕ್ಕೆ ನೀಡುವ ಬೆಂಬಲದಲ್ಲಿ ಯಾವುದೇ ಕೊರತೆ ಮಾಡುವುದಿಲ್ಲ. ಎಸ್‌ಟಿ-1 (ಸ್ಟ್ರಾಟಿಜಿಕ್‌ ಟ್ರೇಡ್‌ ಅಥರೈಸೇಷನ್‌) ಅನುಮತಿ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಒಕ್ಕೂಟಕ್ಕೆ ಭಾರತವನ್ನು ಸೇರಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ದಕ್ಷಿಣ ಮತ್ತು ಕೇಂದ್ರ ಏಷ್ಯಾದ ಪ್ರಿನ್ಸಿಪಲ್‌ ಡೆಪ್ಯುಟಿ ಅಸಿಸ್ಟೆಂಟ್‌ ಸೆಕ್ರೆಟರಿ ಅಲೈಸ್‌ ವೆಲ್ಸ್ ಅವರು ಹೇಳಿದ್ದಾರೆ.
48 ಸದಸ್ಯತ್ವ ರಾಷ್ಟ್ರಗಳ ಪೈಕಿ ಬಹುತೇಕ ರಾಷ್ಟ್ರಗಳು ಭಾರತದ ಎನ್ ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡಿದ್ದವಾದರೂ ಚೀನಾ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಪಡೆಯುವುದಕ್ಕೆ ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT