ವಿಶ್ವದ ದೊಡ್ಡಣ್ಣನಿಗೇ ಎಚ್ಚರಿಕೆ ನೀಡಿದ ಚೀನಾ!
ರಷ್ಯಾ ಫೈಟರ್ ಜೆಟ್ ಗಳನ್ನು ಖರೀದಿಸುವುದರ ವಿರುದ್ಧ ವಿಧಿಸಲಾಗಿರುವ ನಿರ್ಬಧವನ್ನು ತೆಗೆಯಿರಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಅಮೆರಿಕಾಗೆ ಚೀನಾ ಎಚ್ಚರಿಕೆ ನೀಡಿದೆ.
ಬೀಜಿಂಗ್: ರಷ್ಯಾ ಫೈಟರ್ ಜೆಟ್ ಗಳನ್ನು ಖರೀದಿಸುವುದರ ವಿರುದ್ಧ ವಿಧಿಸಲಾಗಿರುವ ನಿರ್ಬಧವನ್ನು ತೆಗೆಯಿರಿ ಇಲ್ಲವೇ ಪರಿಣಾಮ ಎದುರಿಸಿ ಎಂದು ಅಮೆರಿಕಾಗೆ ಚೀನಾ ಎಚ್ಚರಿಕೆ ನೀಡಿದೆ.
ಚೀನಾ ಸೇನೆ ರಷ್ಯಾದಿಂದ ಫೈಟರ್ ಜೆಟ್ ಗಳನ್ನು ಖರೀದಿಸುವುದರ ವಿರುದ್ಧ ವಿಧಿಸಲಾಗಿರುವ ನಿರ್ಬಂಧದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಠಿಣ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ವಿದೇಶಾಂಗ ನೀತಿಗಳ ಪ್ರಾಥಮಿಕ ನಿಯಮಗಳನ್ನೇ ಉಲ್ಲಂಘನೆ ಮಾಡುತ್ತಿದೆ. ಈ ಮೂಲಕ ಚೀನಾದೊಂದಿಗಿನ ಸಂಬಂಧವನ್ನು ಕದಡಿದೆ, ನಿರ್ಬಂಧವನ್ನು ಹಿಂಪಡೆಯುವಂತೆ ಅಮೆರಿಕ ಮೇಲೆ ಒತ್ತಡ ಹೇರಲಾಗುವುದು ಎಂದು ಚೀನಾ ಹೇಳಿದೆ.
ರಷ್ಯಾದಿಂದ ಎಸ್ ಯು-35 ಕಾಂಬ್ಯಾಟ್ ಏರ್ಕ್ರಾಫ್ಟ್ ಹಾಗೂ ಎಸ್-400 ಸರ್ಫೇಸ್-ಏರ್ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸುವುದಕ್ಕೆ ಚೀನಾಗೆ ಅಮೆರಿಕ ನಿರ್ಬಂಧ ವಿಧಿಸಿದೆ. ಅಮೆರಿಕ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರುವ ರಷ್ಯಾದಿಂದ ಯಾವುದೇ ದೇಶ ರಕ್ಶಣಾ ಉಪಕರಣಗಳನ್ನು ಖರೀದಿಸಿದರೆ ಆ ರಾಷ್ಟ್ರದ ಮೇಲೆ ನಿರ್ಬಂಧಗಳನ್ನು ಹೇರುವುದಾಗಿ ಅಮೆರಿಕ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.