ಲಂಡನ್: ರೂ.9 ಸಾವಿರ ಕೋಟಿ ಸಾಲ ಮಾಡಿ, ಭಾರತೀಯ ಬ್ಯಾಂಕುಗಳಿಗೆ ಪಂಗನಾಮ ಹಾಕಿ ವಿದೇಶದಲ್ಲಿ ಸ್ವತಂತ್ರ ಹಕ್ಕಿಯಂತೆ ಹಾರಾಡಿಕೊಂಡಿರುವ ಸಾಲದ ದೊರೆ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆ ಸೋಮವಾರ ವೆಸ್ಟ್ ಮಿನ್'ಸ್ಟರ್ ನ್ಯಾಯಾಲಯದಲ್ಲಿ ನಡೆಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಭಾರತದ ಹೊಸ ಕಾನೂನಿನಂತೆ ಮಲ್ಯ ಅವರನ್ನು ದೇಸ ಭ್ರಷ್ಟ ಎಂದು ಘೋಷಣೆ ಮಾಡಿದ್ದು, ಅವರ ಎಲ್ಲಾ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲು ಕಾನೂನು ಕ್ರಮಗಳನ್ನು ಕೈಗೊಂಡಿದೆ.
ಈ ಹಿನ್ನಲೆಯಲ್ಲಿ ಲಂಡನ್ ನ್ಯಾಯಾಲಯದಲ್ಲಿ ಮಲ್ಯ ಅವರು ತಮ್ಮ ಹೇಳಿಕೆಯನ್ನು ದಾಖಲು ಮಾಡಿದ್ದು, ಅದಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಈ ಸಂಬಂಧ ಇಂದು ಮಧ್ಯಾಹ್ನ ಲಂಡನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಮದ್ಯದ ದೊರೆಯ ಹಣೆಬರಹ ಇಂದೇ ನಿರ್ಧಾರವಾಗುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos