ಮ್ಯಾಕ್ರೋನ್, ಪ್ರಧಾನಿ ಮೋದಿ, 
ವಿದೇಶ

ಪ್ರಧಾನಿ ಮೋದಿ, ಮ್ಯಾಕ್ರೋನ್ ಗೆ 'ಚಾಂಫಿಯನ್ ಆಫ್ ದಿ ಅರ್ಥ್' ಪ್ರಶಸ್ತಿ !

ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರು ವಿಶ್ವಸಂಸ್ಥೆಯ ಚಾಂಫಿಯನ್ ಆಪ್ ದಿ ಅರ್ಥ್ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.

ನ್ಯೂಯಾರ್ಕ್:  ಪ್ರಧಾನಿ ನರೇಂದ್ರ ಮೋದಿ ಹಾಗೂ  ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್  ಅವರು ವಿಶ್ವಸಂಸ್ಥೆಯ ಚಾಂಫಿಯನ್  ಆಪ್ ದಿ ಅರ್ಥ್  ಪ್ರಶಸ್ತಿಗೆ  ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.  

ಇದು ವಿಶ್ವದ ಅತ್ಯಂತ ದೊಡ್ಡದಾದ ಪರಿಸರ ಪ್ರಶಸ್ತಿಯಾಗಿದ್ದು,  ಅಂತಾರಾಷ್ಟ್ರೀಯ ಸೌರ ಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿ   ಮಾಡಿದ ಅನುಪಮ ಕೆಲಸ ಹಾಗೂ ಪರಿಸರ ಸಂರಕ್ಷಣೆಯಲ್ಲಿ  ಹೊಸ ಕ್ಷೇತ್ರಗಳ ಪ್ರೋತ್ಸಾಹದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ.

2022 ರೊಳಗೆ ಭಾರತವನ್ನು ಪ್ಲಾಸ್ಟಿಕ್ ಮುಕ್ತ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ನರೇಂದ್ರಮೋದಿ ಅವರ ಸಂಕಲ್ಪ ಹಾಗೂ ಪರಿಸರ  ರಕ್ಷಣೆ ನಿಟ್ಟಿನಲ್ಲಿ ಮ್ಯಾಕ್ರೋನ್ ಅವರ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಮಧ್ಯೆ  ಸುಸ್ಥಿರ ಇಂಧನ ಬಳಕೆಯಲ್ಲಿ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದುಕೊಂಡಿದೆ. 73 ನೇ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ ಅಧಿವೇಶನ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!