ಇಂಡೋನೇಷಿಯಾದಲ್ಲಿ ಪ್ರಬಲ ಭೂಕಂಪ, ಭಾರೀ ಸುನಾಮಿ ಎಚ್ಚರಿಕೆ! 
ವಿದೇಶ

ಇಂಡೋನೇಷಿಯಾದಲ್ಲಿ ಪ್ರಬಲ ಭೂಕಂಪ, ಪುಲು ನಗರಕ್ಕೆ ಅಪ್ಪಳಿಸಿದ ಸುನಾಮಿ!

ಇಂಡೋನೇಷಿಯಾದ ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.

ಜಕಾರ್ತಾ: ಇಂಡೋನೇಷಿಯಾದ ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7..5ರಷ್ಟು ದಾಖಲಾಗಿದೆ. ಸೆಂಟ್ರಲ್ ಸುಲಾವೆಸಿ ಪಟ್ಟಣದಿಂದ ಈಶಾನ್ಯಕ್ಕೆ 56 ಕಿ.ಮೀ ದೂರ, 10 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ.
ಶುಕ್ರವಾರ ಸಂಭವಿಸಿದ ಎರಡನೇ ಭೂಕಂಪ ಇದಾಗಿದ್ದು ಭೂಕಂಪದಿಂದ ಅನೇಕ ಮನೆಗಳು ಕುಸಿದಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. 
ಇನ್ನು ಇಂಡೋನೇಷಿಯಾದ ಪುಲು ನಗರಕ್ಕೆ ಸುನಾಮಿ ಅಪ್ಪಳಿಸಿದೆ ಎಂದು ಸ್ಥಳೀಯ ಟಿವಿ ವಾಹಿನಿ ಸುದ್ದಿ ಪ್ರಸಾರ ಮಾಡಿದೆ. ಪುಲು ನಗರವು 350,000 ಜನಸಂಖ್ಯೆ ಹೊಂದಿದ್ದು ಭೂಕಂಪ ಕೇಂದ್ರದಿಂದ ಸುಮಾರು 80  ಕಿ.ಮೀ. ದೂರವಿದೆ.

ಇಂಡೋನೇಷಿಯಾ ಟಿವಿ ವಾಹಿನಿಯು ಪುಲು ನಗರಕ್ಕೆ ಭೀಕರ ಅಲೆಗಳು ಬಂದು ಅಪ್ಪಳಿಸುತಿರುವ ದೃಶ್ಯಗಳನ್ನು ಪ್ರಸಾರ ಮಾಡಿದ್ದು ಜನರು ಭಯಬೀತಿಯಿಂದ ಓಡುತ್ತಿರುವದನ್ನು ನಾವಲ್ಲಿ ಕಾಣುತ್ತೇವೆ.
ಇದಕ್ಕೆ ಮುನ್ನ ಇಂದು ಬೆಳಿಗ್ಗೆ ಸಂಭವಿಸಿದ ಭೂಕಂಪದಲ್ಲಿ 6.1 ತೀವ್ರತೆ ದಾಖಲಾಗಿತ್ತು. ಭೂಕಂಪದಿಂದ ಒಬ್ಬ ವ್ಯಕ್ತಿ ಮೃತಪಟ್ಟು 10 ಜನರಿಗೆ ಗಂಭೀರ ಗಾಯವಾಗಿದೆ.
2004ರಲ್ಲಿ ಇಂಡೋನೇಷಿಯಾ ಸುಮಾತ್ರಾ ದ್ವೀಪದ ಬಳಿ ಸಂಭವಿಸಿದ್ದ ಭೀಕರ ಭೂಕಂಪ (9.1 ತೀವ್ರತೆ) ದಿಂದ ಸುನಾಮಿ ಸೃಷ್ಟಿಯಾಗಿದ್ದು ಭಾರತ ಸೇರಿ ಸುತ್ತ ಮುತ್ತಲ ರಾಷ್ಟ್ರಗಳಲ್ಲಿ ಸುಮಾರು ಎರಡು ಲಕ್ಷ ಮಂದಿ ಸಾವಿಗೀಡಾಗಿದ್ದರು.
ಇನ್ನು ಇಂದು ಸಂಭವಿಸಿದ ಭೂಕಂಪದ ಸ್ಥಳದಿಂದ ಬಹು ದೂರದಲ್ಲಿರುವ ಲೋಂಬೋಕ್ ದ್ವೀಪದಲ್ಲಿ ಇದೇ ಜುಲೈ-ಆಗಸ್ಟ್ ತಿಂಗಳಿನಲ್ಲಿ ಭೂಕಂಪನವಾಗಿದ್ದು ಅದರಲ್ಲಿ ಕನಿಷ್ಟ ೫೦೦ ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT