ಟ್ರಂಪ್ ಭಾರತ ಪ್ರವಾಸದ ಬಗ್ಗೆ ಸುಳಿವು ನೀಡಿದ ಅಮೆರಿಕ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಅಮೆರಿಕ ಸರ್ಕಾರ ಹೇಳಿದೆ.
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವುದನ್ನು ಎದುರುನೋಡುತ್ತಿದ್ದಾರೆ ಎಂದು ಅಮೆರಿಕ ಸರ್ಕಾರ ಹೇಳಿದೆ.
ದಕ್ಷಿಣ ಮತ್ತು ಕೇಂದ್ರ ಏಷ್ಯಾ ಪ್ರಧಾನ ಸಹಾಯಕ ಕಾರ್ಯದರ್ಶಿ ಆಲಿಸ್ ವೆಲ್ಸ್ ಟ್ರಂಪ್ ಭಾರತ ಭೇಟಿ ಬಗ್ಗೆ ಮಾಹಿತಿ ನೀಡಿದ್ದು, ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವುದನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ. 2019 ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಡೊನಾಲ್ಡ್ ಟ್ರಂಪ್ ಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬರುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಅಮೆರಿಕ ಸರ್ಕಾರ, ಡೊನಾಲ್ಡ್ ಟ್ರಂಪ್ ಗೆ ಅಮೆರಿಕ ಹಾಗು ವಿದೇಶಗಳಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳನ್ನು ಪರಿಗಣಿಸಿ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದೆ. ಗಣರಾಜ್ಯೋತ್ಸವ ದಿನಾಚರಣೆಯಂದು ನಡೆಯುವ ಸೇನಾ ಮೆರವಣಿಳನ್ನು ಡೊನಾಲ್ಡ್ ಟ್ರಂಪ್ ಇಷ್ಟಪಡುತ್ತಾರೆ, ಅಮೆರಿಕಾದಲ್ಲೂ ಇದೇ ಮಾದರಿಯ ಸೇನಾ ಮೆರವಣಿಗೆ ನಡೆಸಲು ಬಯಸಿದ್ದಾರೆ, ಭಾರತಕ್ಕೆ ಭೇಟಿ ನೀಡುವುದನ್ನು ಟ್ರಂಪ್ ಎದುರು ನೋಡುತ್ತಿದ್ದಾರೆ ಎಂದು ಅಮೆರಿಕ ಸರ್ಕಾರ ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.