ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

'ನಮ್ಮ ಸ್ನೇಹಿತ ಭಾರತ'ಕ್ಕೆ ತೈಲ ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ: ಅಮೆರಿಕ

ಇರಾನ್ ಮೇಲೆ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳು ನವೆಂಬರ್ 4ರಿಂದ ಜಾರಿಗೆ ಬರಲಿದ್ದು, ತೈಲಕ್ಕಾಗಿ...

ಸಾಂದರ್ಭಿಕ ಚಿತ್ರ
Lingaraj Badiger
Updated On : 29 Sept 2018, 6:27 am
ನ್ಯೂಯಾರ್ಕ್: ಇರಾನ್ ಮೇಲೆ ಅಮೆರಿಕ ವಿಧಿಸಿರುವ ಕಠಿಣ ನಿರ್ಬಂಧಗಳು ನವೆಂಬರ್ 4ರಿಂದ ಜಾರಿಗೆ ಬರಲಿದ್ದು, ತೈಲಕ್ಕಾಗಿ ಇರಾನ್‌ ಅನ್ನು ಅವಲಂಬಿಸಿರುವ ಭಾರತಕ್ಕೆ ಪರ್ಯಾಯ ಪೂರೈಕೆ ಮಾರ್ಗಗಳನ್ನು ಒದಗಿಸುವುದಾಗಿ ಅಮೆರಿಕ ಶನಿವಾರ ಹೇಳಿದೆ.
'ಭಾರತಕ್ಕೆ ಹೆಚ್ಚಿನ ಪ್ರಮಾಣದ ತೈಲ ಆಮದು ಅಗತ್ಯ ಇರುವುದನ್ನು ವಾಷಿಂಗ್ಟನ್ ಗಮನಿಸಿದೆ. ಇದಕ್ಕಾಗಿ ಪರ್ಯಾಯ ತೈಲ ಪೂರೈಕೆ ಕ್ರಮಗಳ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ. ನಮ್ಮ ಸ್ನೇಹಿತ ಭಾರತದ ಆರ್ಥಿಕತೆ ಮೇಲೆ ಯಾವುದೇ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ' ಎಂದು ಟ್ರಂಪ್ ಆಡಳಿತದ ಅಧಿಕಾರಿಯೊಬ್ಬರು ಹೇಳಿದ್ದಾರೆ.
2015ರಲ್ಲಿ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಿದ್ದ ಅಮೆರಿಕ, ಅದು ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿ ಈ ವರ್ಷದ ಆರಂಭದಲ್ಲಿ ಮತ್ತೆ ನಿರ್ಬಂಧ ವಿಧಿಸಿತ್ತು.

Advertisement

Advertisement

ನಿರ್ಬಂಧದ ಮೊದಲ ಹಂತ ಈಗಾಗಲೇ ಜಾರಿಯಲ್ಲಿದ್ದು, ಅದು ನವೆಂಬರ್ 4ರಿಂದ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ. ಈ ಅವಧಿಯಲ್ಲಿ ಭಾರತ ಸೇರಿದಂತೆ ಎಲ್ಲ ದೇಶಗಳೂ ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣ ಸ್ಥಗಿತಗೊಳಿಸಲಿವೆ ಎಂದು ಅಮೆರಿಕ ನಿರೀಕ್ಷಿಸಿದೆ.
ಇರಾನ್ ಜತೆ ಯಾವುದೇ ರೀತಿಯ ವ್ಯವಹಾರ ಮುಂದುವರಿಸುವ ಯಾವುದೇ ದೇಶವು ತನ್ನ ಬ್ಯಾಂಕಿಂಗ್ ಮತ್ತು ಹಣಕಾಸು ವ್ಯವಸ್ಥೆಯೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗುವುದು ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಇರಾನ್ ನ ಅತಿ ದೊಡ್ಡ ತೈಲ ಆಮದುದಾರರಲ್ಲಿ ಒಂದಾದ ಭಾರತ, ಈಗಾಗಲೇ ಆಮದು ಪ್ರಮಾಣವನ್ನು ಕಡಿಮೆಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement