ವಿಶ್ವಸಂಸ್ಥೆಯಲ್ಲಿ ಪಾಕ್ ವಿದೇಶಾಂಗ ಸಚಿವ 
ವಿದೇಶ

ಪೇಶಾವರ ಶಾಲೆ ಮೇಲಿನ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ: ಪಾಕಿಸ್ತಾನ

ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.

ವಿಶ್ವಸಂಸ್ಥೆ: ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನ ಗಂಭೀರ ಆರೋಪ ಮಾಡಿದೆ.
ಈ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿರುದ್ಧ ಬೊಟ್ಟು ಮಾಡಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮ್ಮೂದ್​​ ಖುರೇಷಿ, ಪಾಕಿಸ್ತಾನದ ಪೇಶಾವರ ಮಿಲಿಟರಿ ಶಾಲೆ ಮೇಲೆ ನಡೆದಿದ್ದ ಭೀಕರ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 2014ರಲ್ಲಿ ಪೇಶಾವರದ ಶಾಲೆಯೊಂದರ ಮೇಲೆ ನಡೆದ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಖುರೇಷಿ ಗಂಭೀರ ಆರೋಪ ಮಾಡಿದರು. ಈ ಘಟನೆಯಲ್ಲಿ ಸುಮಾರು 150 ಮಕ್ಕಳು ದಾರುಣವಾಗಿ ಸಾವಿಗೀಡಾಗಿದ್ದರು. ಈ ಘಟನೆಯನ್ನು ಪಾಕ್​ ಇಂದಿಗೂ ಮರೆತಿಲ್ಲ. ಈ ದಾಳಿಯಲ್ಲಿ ಭಾಗಿಯಾದ ಉಗ್ರರಿಗೆ ಭಾರತದಿಂದ ಬೆಂಬಲ ದೊರಕಿದೆ ಎಂದು ಖುರೇಷಿ ಆರೋಪಿಸಿದರು.
ಅಂತೆಯೇ ನ್ಯೂಯಾರ್ಕ್​ನಲ್ಲಿ ನಡೆಯ ಬೇಕಿದ್ದ ವಿದೇಶಾಂಗ ಸಚಿವರ ಮಟ್ಟದ ಮಾತುಕತೆ ಮುರಿದುಬೀಳಲು ಭಾರತವೇ ಕಾರಣ ಎಂದು ಆರೋಪಿಸಿರುವ ಅವರು ಭಾರತ ಶಾಂತಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ.
'ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ಭಾರತ ಹಲವು ಭಾರಿ ಹಿಂತೆಗೆದುಕೊಂಡಿದ್ದು, ಶಾಂತಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಭಾರತ ಆಯ್ದುಕೊಂಡಿದೆ. ಕಾಶ್ಮೀರಿ ಕಾರ್ಯಕರ್ತನ ಹೆಸರಲ್ಲಿ ಅಂಚೆ ಚೀಟಿ ಬಿಡುಗಡೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ನೆಪವೊಡ್ಡಿ ಭಾರತ ಪಾಕ್​ನೊಂದಿಗಿನ ಮಾತುಕತೆಯನ್ನು ಮುರಿದುಕೊಳ್ಳುತ್ತಿದೆ ಎಂದು ಖುರೇಷಿ ಆರೋಪಿಸಿದರು.
ಕಾಶ್ಮೀರ ವಿವಾದ ಬಗೆಹರಿಯುವವರೆಗೂ ದಕ್ಷಿಣ ಏಷ್ಯಾ ಭಾಗದಲ್ಲಿ ಶಾಶ್ವತವಾಗಿ ಶಾಂತಿ ನೆಲೆಸದು. ಈ ಸಮಸ್ಯೆಯು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳ ಆಧಾರದ ಮೇಲೆ ಹಾಗೂ ಕಾಶ್ಮೀರಿಗಳ ಇಷ್ಟದಂತೆ ಬಗೆಹರಿಯಬೇಕು. ಕಾಶ್ಮೀರ ವಿವಾದ ಬಗೆಹರಿಯದೇ ಇರುವುದು ಮಾನವೀಯತೆಯ ಆತ್ಮಸಾಕ್ಷಿಯ ಮೇಲಿನ ಹೊಡೆತವಾಗಿದ್ದು, ಶಾಂತಿ ಸಾಧಿಸುವುದರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಸಾರ್ವಭೌಮ ಸಮಾನತೆ ಮತ್ತು ಪರಸ್ಪರ ಗೌರವ ಆಧಾರದ ಮೇಲೆ ಇಸ್ಲಾಮಾಬಾದ್, ನವದೆಹಲಿಯೊಂದಿಗೆ ಸಂಬಂಧ ಬೆಳೆಸಬೇಕೆಂದುಕೊಂಡಿದೆ. ಗಂಭೀರ ಹಾಗೂ ಸಮಗ್ರವಾದ ಮಾತುಕತೆಯ ಮೂಲಕ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದನ್ನು ನಾವು ಎದರು ನೋಡುತ್ತಿದ್ದೇವೆ ಎಂದು ಖುರೇಷಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!