ವಿದೇಶ

ವಿಜಯ್ ಮಲ್ಯ ಅರ್ಜಿ ವಜಾಗೊಳಿಸಿದ ಯುಕೆ ಹೈಕೋರ್ಟ್, ಶೀಘ್ರ ಗಡಿಪಾರು ಸಾಧ್ಯತೆ

Lingaraj Badiger
ಲಂಡನ್: ಲಂಡನ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರು ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
62 ವರ್ಷದ ವಿಜಯ್ ಮಲ್ಯ ಅವರು 9 ಸಾವಿರ ಕೋಟಿ ರುಪಾಯಿ ವಂಚನೆ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿದ್ದು, ಭಾರತಕ್ಕೆ ಬೇಕಾಗಿದ್ದಾರೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ವಿಜಯ್ ಮಲ್ಯ ಗಡಿಪಾರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಲಂಡನ್ ವೆಸ್ಟ್ ಮಿನ್ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್, ಹಣಕಾಸಿನ ವಿಚಾರದಲ್ಲಿ ಹಾಗೂ ವಂಚನೆಗೆ ಸಂಬಂಧಪಟ್ಟಂತೆ ಮಲ್ಯ ವಿರುದ್ಧದ ಆರೋಪಗಳಿಗೆ ಸಾಕ್ಷ್ಯಗಳಿವೆ ಎಂದು ಹೇಳಿ, ಗಡಿಪಾರು ಮಾಡಲು ಆದೇಶ ನೀಡಿತ್ತು.
ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ನಲ್ಲೂ ಮದ್ಯದ ದೊರೆಗೆ ಹಿನ್ನಡೆಯಾಗಿದ್ದು, ಶೀಘ್ರದಲ್ಲೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆ ಇದೆ.
SCROLL FOR NEXT