ವಿದೇಶ

ಪಾಕಿಸ್ತಾನ ನೈಋತ್ಯ ನಗರದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟ: 16 ಮಂದಿ ಸಾವು

Raghavendra Adiga
ಕ್ವೆಟ್ಟಾ(ಪಾಕಿಸ್ತಾನ): ಶುಕ್ರವಾರ ನೈಋತ್ಯ ಪಾಕಿಸ್ತಾನದ ಕ್ವೆಟ್ಟಾ ನಗರದಲ್ಲಿನ ತರಕಾರಿ ಮಾರುಕಟ್ಟೆಯಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಪೋಟಕ್ಕೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಮತ್ತು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ
ಹಿರಿಯ ಪೊಲೀಸ್ ಮುಖ್ಯಸ್ಥ ಅಬ್ದುರ್ ರಜಾಕ್ ಚೀಮಾ ಅವರ ಪ್ರಕಾರ, ಅಲ್ಪಸಂಖ್ಯಾತ ಶಿಯಾತ್ ಮುಸ್ಲಿಮರು ವಾಸಿಸುವ ವಸತಿ ಪ್ರದೇಶದಲ್ಲಿ ಬಾಂಬ್ ಸ್ಫೋಟ ನಡೆದಿದೆ.ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ.
 ಕ್ವೆಟ್ಟಾದ ಹ ಹಜಾರ್‍ ಜಂಗ್‍ ಮಾರುಕಟಟೆ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ ಸ್ಫೋಟದಲ್ಲಿ ಓರ್ವ ಅರೆಸೇನಾ ಪಡೆ ಯೋಧ ಸಹ ಮೃತಪಟ್ಟಿದ್ದಾರೆ.
 ಪೊಲೀಸ್, ರಕ್ಷಣಾ ತಂಡಗಳು ಮತ್ತು ಹೆಚ್ಚುವರಿ ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 ಆಸ್ಪತ್ರೆಯ ಮೂಲಗಳ ಪ್ರಕಾರ, ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ.
SCROLL FOR NEXT