ಇಂಡೋನೇಷ್ಯಾ ಚುನಾವಣೆ: ಮತ ಎಣಿಕೆ ಮಾಡುತ್ತಿದ್ದ 270 ಚುನಾವಣೆ ಸಿಬ್ಬಂದಿ ಸಾವು!
ಮತ ಎಣಿಕೆ ಮಾಡುತ್ತಿದ್ದ 270 ಚುನಾವಣಾ ಸಿಬ್ಬಂದಿಗಳು ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ಮತ ಎಣಿಕೆ ಮಾಡುತ್ತಿದ್ದ 270 ಚುನಾವಣಾ ಸಿಬ್ಬಂದಿಗಳು ಮೃತಪಟ್ಟಿರುವ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ಮಿಲಿಯನ್ ಗಟ್ಟಲೆ ಬ್ಯಾಲೆಟ್ ಪೇಪರ್ ಗಳನ್ನು ಎಣಿಕೆ ಮಾಡಲು ದೀರ್ಘಾವಧಿ ಕಾರ್ಯ ನಿರ್ವಹಣೆ ಮಾಡಿರುವ ಪರಿಣಾಮ ಒಟ್ಟು 1,878 ಅಸ್ವಸ್ಥಗೊಂಡಿದ್ದು, 270 ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಏ.17 ರಂದು ನಡೆದ ಮತದಾನದ ಮತ ಎಣಿಕೆಗೆ 7 ಮಿಲಿಯನ್ ಜನರು ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಇಡಿ ಕೆಲಸ ಮಾಡಿರುವ ಪರಿಣಾಮದಿಂದಾಗಿ ತೀವ್ರವಾಗಿ ಆಯಾಸಗೊಂಡು ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ಕೆಪಿಯು ನ ಚುನಾವಣಾ ಆಯೋಗದ ವಕ್ತಾರರು ಮಾಹಿತಿ ನೀಡಿದ್ದಾರೆ.
ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವುದಕ್ಕಾಗಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಸಂಸತ್, ಅಧ್ಯಕ್ಷೀಯ ಚುನಾವಣೆಯನ್ನು ಒಟ್ಟಿಗೆ ನಡೆಸಲಾಗಿದ್ದು 260 ಮಿಲಿಯನ್ ಜನರು ಇದೇ ಮೊದಲ ಬಾರಿಗೆ ಒಟ್ಟಿಗೆ ಮತದಾನ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.