ಸಾಂದರ್ಭಿಕ ಚಿತ್ರ 
ವಿದೇಶ

ಇಂಡೋನೇಷ್ಯಾದ ಸುಮಾತ್ರದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆ 7 ರಷ್ಟು ದಾಖಲಾಗಿದೆ.

ಜಕಾರ್ತ: ಇಂಡೋನೇಷ್ಯಾದ ಸುಮತ್ರಾ ಹಾಗೂ ಜಾವಾ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆ 7 ರಷ್ಟು ದಾಖಲಾಗಿದೆ.
ರಿಕ್ಟರ್‌ ಮಾಪಕದಲ್ಲಿ ಭೂಕಂಪದ ತೀವ್ರತೆ 7 ರಷ್ಟಿತ್ತು ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ.
ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸಮುದ್ರದ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ತಿಳಿಸಿದೆ.
ಸ್ಥಳೀಯ ಹವಾಮಾನ ಇಲಾಖೆ ಸುನಾಮಿ ಅಪಾಯದ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT