ವಿದೇಶ

ಭಾರತ ಯಾವುದೇ ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್

Srinivasamurthy VN
ಇಸ್ಲಾಮಾಬಾದ್: ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣ ಮತ್ತು ಅನಿಶ್ಚಿತತೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕ್ರಿಯೆ ನೀಡಿದ್ದು, ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈಹಾಕಿ, ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇಸ್ಲಾಮಾಬಾದ್ ನಲ್ಲಿ ನಡೆದ ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ ಸೇನಾಧಿಕಾರಿಗಳ ಜೊತೆಗಿನ ಭೇಟಿ ಬಳಿಕ ಮಾತನಾಡಿದ ಇಮ್ರಾನ್ ಖಾನ್ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿ ಕುರಿತು ತಾವು ಅವಲೋಕಿಸುತ್ತಿದ್ದು, ಭದ್ರತಾ ಅಧಿಕಾರಿಗಳು ಕೂಡ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭಾರತ ಯಾವುದೇ ರೀತಿಯ ದುಸ್ಸಾಹಸಕ್ಕೆ ಕೈ ಹಾಕಿದರೆ ಅಥವಾ ಆಕ್ರಮಣಕಾರಿ ಮನೋಭಾವ ತೋರಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಅಂತೆಯೇ ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಕೂಡ ಈ ಹಿಂದೆ ಕಳವಳ ವ್ಯಕ್ತಪಡಿಸಿತ್ತು. ಈ ಕುರಿತಂತೆ ನಾವೂ ಕೂಡ ಆಗಾಗ್ಗೆ ವಿಶ್ವಸಂಸ್ಥೆಗೆ ಮಾಹಿತಿ ನೀಡುತ್ತಾ ಬಂದಿದ್ದೇವೆ. ಯಾವುದೇ ಸರ್ಕಾರ ಕಾಶ್ಮೀರ ಜನತೆಯ ಆಶೋತ್ತರಗಳ ವಿರುದ್ಧ ನಡೆಯುವಂತಿಲ್ಲ ಎಂದು ಹೇಳಿದ್ದಾರೆ.
SCROLL FOR NEXT