ವಿದೇಶ

ಕಾಶ್ಮೀರದಲ್ಲಿ 370ನೇ ವಿಧಿ ರದ್ದು ವಿರುದ್ಧ ಒಂದಾಗುವಂತೆ ಪಾಕ್ ರಾಜಕೀಯ ಪಕ್ಷಗಳಿಗೆ ಖುರೇಶಿ ಕರೆ

Lingaraj Badiger

ಇಸ್ಲಾಮಾಬಾದ್: ಭಾರತ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ 370ನೇ ವಿಧಿ ರದ್ದುಗೊಳಿಸುವುದರ ವಿರುದ್ಧ ನಾವು ಒಂದಾಗಬೇಕು ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾಹ್ ಮೆಹಮೂದ್ ಖುರೇಶಿ ಅವರು ಸೋಮವಾರ ಕರೆ ನೀಡಿದ್ದಾರೆ.

ಇಂದು ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಬಾದ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಖುರೇಶಿ, ಕಾಶ್ಮೀರ ವಿಚಾರದಲ್ಲಿ ಇಡೀ ಪಾಕಿಸ್ತಾನ ಒಂದಾಗಿದ್ದು, ರಾಜಕೀಯ ಪಕ್ಷಗಳು ಒಗ್ಗಟ್ಟಾಗಿವೆ ಎಂದರು. ಅಲ್ಲದೆ ಆಗಸ್ಟ್ 14 ರಂದು ಕಾಶ್ಮೀರಿಗಳ ಪರವಾಗಿ ಧ್ವನಿ ಎತ್ತಬೇಕು ಎಂದರು.

ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಭಿನ್ನಾಭಿಪ್ರಾಯ ಇರಬಹುದು. ಆದರೆ ಕಾಶ್ಮೀರ ವಿಚಾರದಲ್ಲಿ ನಾವು ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಖುರೇಶಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ರದ್ದುಗೊಳಿ, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಬಳಿಕ ಆಗಸ್ಟ್ 14 ಅನ್ನು ಕಾಶ್ಮೀರ ಐಕ್ಯತಾ ದಿನ ಮತ್ತು ಆಗಸ್ಟ್ 15 ಅನ್ನು ಕರಾಳ ದಿನವನ್ನಾಗಿ ಆಚರಿಸುವುದಾಗಿ ಪಾಕಿಸ್ತಾನ ಈಗಾಗಲೇ ಘೋಷಿಸಿದೆ.

SCROLL FOR NEXT