ಸಾಂದರ್ಭಿಕ ಚಿತ್ರ 
ವಿದೇಶ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಕಾಶ್ಮೀರ ಕುರಿತು ರಹಸ್ಯ ಸಭೆ

ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.

ವಿಶ್ವಸಂಸ್ಥೆ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.

ಜಮ್ಮು ಮತ್ತು ಕಾಶ್ಮೀರ ಕುರಿತು ಆಗಸ್ಟ್ 16ರಂದು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷ ಜೋನ್ನಾ ವ್ರೋನೆಕ್ಕಾ ಅವರು ಬುಧವಾರ ಹೇಳಿರುವುದಾಗಿ ವರದಿಗಳು ತಿಳಿಸಿವೆ.

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಹೇಳಿದೆ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಸಲಾಗುತ್ತಿದೆ.

ಅಲ್ಲದೆ ಪಾಕಿಸ್ತಾನ ಕಾಶ್ಮೀರದ ಪರಿಸ್ಥಿತಿ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾಪಿಸುವಂತೆ ಮಿತ್ರ ರಾಷ್ಟ್ರ ಚೀನಾಕ್ಕೆ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಅಧ್ಯಕ್ಷ ರಾಷ್ಟ್ರ ಪೋಲೆಂಡ್​ಗೆ ಪತ್ರ ಬರೆದಿರುವ ಚೀನಾ, ಕಾಶ್ಮೀರ ಕುರಿತು ಗೌಪ್ಯ ಸಭೆ ಆಯೋಜಿಸುವಂತೆ ಆಗ್ರಹಿಸಿದೆ.

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ವಿಭಜಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದೆ. ಇದಕ್ಕೆ ಪಾಕಿಸ್ತಾನ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭಾರತದ ಕ್ರಮ ಕಾನೂನು ಬಾಹಿರ ಮತ್ತು ವಿಶ್ವಸಂಸ್ಥೆಯ ನಿರ್ಣಯಗಳ ಉಲ್ಲಂಘನೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ