ಮೋದಿ,ಟ್ರಂಪ್ 
ವಿದೇಶ

ಜಮ್ಮು-ಕಾಶ್ಮೀರ ದ್ವಿಪಕ್ಷೀಯ ಸಮಸ್ಯೆ, ಮಾತುಕತೆಗೆ ಮಧ್ಯಸ್ಥಿಕೆ ಬೇಕಿಲ್ಲ: ಟ್ರಂಪ್‌ಗೆ ಮೋದಿ ಸ್ಪಷ್ಟನೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯವಾಗಿದ್ದು, ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಯಾವುದೇ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸ್ಪಷ್ಟಪಡಿಸಿದ್ದಾರೆ.

ಬಿಯರಿಟ್ಜ್: ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳು ದ್ವಿಪಕ್ಷೀಯವಾಗಿದ್ದು, ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಯಾವುದೇ ಅವಕಾಶವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಸ್ಪಷ್ಟಪಡಿಸಿದ್ದಾರೆ.

 ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ ನಡೆದ ಜಿ -7 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ, ಭಾರತ ಮತ್ತು ಪಾಕಿಸ್ತಾನ ಎರಡೂ ಬಡತನ ಮತ್ತು ಅನಕ್ಷರತೆಯ ವಿರುದ್ಧ ಹೋರಾಡಬೇಕಾಗಿದೆ ಎಂದರು

ತಾನು ಚುನಾವಣೆಯಲ್ಲಿ ಗೆದ್ದ ನಂತರ ನಾನು ಪಾಕಿಸ್ತಾನ ಪ್ರಧಾನಿಗೆ ಕರೆ ಮಾಡಿ, ಎರಡೂ ದೇಶಗಳು ಬಡತನ, ಅನಕ್ಷರತೆ ಮತ್ತು ಇತರ ದೊಡ್ಡ ಸಮಸ್ಯೆಗಳ ವಿರುದ್ಧ ಹೋರಾಡಬೇಕಾಗಿದೆ ಎಂದು ಹೇಳಿದ್ದೆ. ನಮ್ಮ ಭಿನ್ನಾಭಿಪ್ರಾಯಗಳನ್ನು ನಿವಾರಿಸಿ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಮೋದಿ ಹೇಳಿದರು.

 ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳು ದ್ವಿಪಕ್ಷೀಯ ಮತ್ತು ನಾವು ವಿಶ್ವದ ಯಾವುದೇ ದೇಶದಿಂದ ಮಧ್ಯಸ್ಥಿಕೆ ಬಯಸುವುದಿಲ್ಲ. 1947ಕ್ಕಿಂತ ಮೊದಲು ನಾವು ಒಂದೇ ದೇಶವಾಗಿದ್ದು, ಈಗಲೂ ನಾವು ಪರಿಹಾರವನ್ನು ಕಂಡುಕೊಳ್ಳಬಹುದು ಎಂದು ನಾನು ಭಾವಿಸುತ್ತೇನೆ ಮೋದಿ ಸ್ಪಷ್ಟಪಡಿಸಿದ್ದಾರೆ.

 ನಾವು ಕಳೆದ ರಾತ್ರಿ ಕಾಶ್ಮೀರದ ಬಗ್ಗೆ ಮಾತನಾಡಿದ್ದೇವೆ. ಮೋದಿ ಕಾಶ್ಮೀರವನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದಾರೆ ಎಂದು ನಿಜವಾಗಿಯೂ ಭಾವಿಸುವೆ. ಅವರು ಪಾಕಿಸ್ತಾನದೊಂದಿಗೆ ಮಾತನಾಡುತ್ತಾರೆ ಮತ್ತು ಅದರಿಂದ ಉತ್ತಮ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಟ್ರಂಪ್‌ ಹೇಳಿದರು. 

 ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಟ್ರಂಪ್ ಅವರು ಎರಡೂ ಕಡೆಯವರು ಬಯಸಿದರೆ ಕಾಶ್ಮೀರ ವಿಷಯದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆಗೆ ಸಿದ್ಧ ಎಂದಿದ್ದರು.
  
ಪಾಕಿಸ್ತಾನದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಯಾವುದೇ ದೇಶವು ಮಧ್ಯಸ್ಥಿಕೆ ವಹಿಸುವ ಯಾವುದೇ ಪ್ರಸ್ತಾಪವನ್ನು ಭಾರತ ಪದೇ ಪದೇ ತಿರಸ್ಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT