ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ 
ವಿದೇಶ

'ಭಾರತ-ಪಾಕ್ ಮಾತುಕತೆ ಬಗ್ಗೆ ಮಾತನಾಡೋರು ಮೂರ್ಖರು, ಅಕ್ಟೋಬರ್-ನವೆಂಬರ್ ವೇಳೆಗೆ ಯುದ್ಧವೇ ನಡೆಯಲಿದೆ!'

ಭಾರತದ ಜೊತೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆಯ ಬಗ್ಗೆ ಇನ್ನೂ ಮಾತನಾಡುವವರು ಮೂರ್ಖರು, ಅಕ್ಟೋಬರ್-ನವೆಂಬರ್ ವೇಳೆಗೆ ಪೂರ್ಣ ಪ್ರಮಾಣದ ಯುದ್ಧವೇ ನಡೆಯಲಿದೆ... ಹೀಗಂತ ಹೇಳಿದ್ದು ಪಾಕಿಸ್ತಾನದ ಸಚಿವ 

ಭಾರತದ ಜೊತೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆಯ ಬಗ್ಗೆ ಇನ್ನೂ ಮಾತನಾಡುವವರು ಮೂರ್ಖರು, ಅಕ್ಟೋಬರ್-ನವೆಂಬರ್ ವೇಳೆಗೆ ಪೂರ್ಣ ಪ್ರಮಾಣದ ಯುದ್ಧವೇ ನಡೆಯಲಿದೆ... ಹೀಗಂತ ಹೇಳಿದ್ದು ಪಾಕಿಸ್ತಾನದ ಸಚಿವ 

ರಾವಲ್ಪಿಂಡಿಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್, ಭಾರತದ ವಿರುದ್ಧ ಅಂತಿಮ ಯುದ್ಧ ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. 

ಕಾಶ್ಮೀರ ವಿವಾದವನ್ನು ಬಗೆಹರಿಸಬೇಕೆಂಬ ಉದ್ದೇಶ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಇದ್ದಿದ್ದರೆ ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆಗೆ ಮುಂದಾಗುತ್ತಿತ್ತು ಎಂದೂ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ. 

ಕಾಶ್ಮೀರ ವಿಷಯದಲ್ಲಿ ಚೀನಾ ಎಂದಿಗೂ ಪಾಕಿಸ್ತಾನದ ಪರವಾಗಿಯೇ ಇರುತ್ತದೆ ಎಂದಿರುವ ಸಚಿವ, ಮುಸ್ಲಿಂ ಬಾಹುಳ್ಯವಿರುವ ರಾಷ್ಟ್ರಗಳು ಕಾಶ್ಮೀರದ ವಿಷಯವಾಗಿ ಮೌನಕ್ಕೆ ಶರಣಾಗಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?