ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಸಾವು 
ವಿದೇಶ

ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ:  ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಸಾವು

ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. 

ನ್ಯೂಯಾರ್ಕ್: ನ್ಯೂಜೆರ್ಸಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಅಧಿಕಾರಿ ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. 

ಜೆರ್ಸಿ ನಗರದ ರಸ್ತೆಯೊಂದರಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ನಾಗರೀಕರು ಹಾಗೂ ಇಬ್ಬರು ಶಂಕಿತರು ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಅಲ್ಲದೆ, ಗುಂಡಿನ ದಾಳಿ ವೇಳೆ ಪೊಲೀಸ್ ಅಧಿಕಾರಿ ಜೋಸೆಫ್ ಸೀಲ್ಸ್ (40) ಎಂಬುವವರೂ ಕೂಡ ಸಾವನ್ನಪ್ಪಿದ್ದಾರೆಂದು ಪೊಲೀಸ್ ಮುಖ್ಯಸ್ಥ ಮೈಕೆಲ್ ಕೆಲ್ಲಿ ತಿಳಿಸಿದ್ದಾರೆ. 

ನಗರದ ಮ್ಯಾನ್ ಹಟ್ಟನ್ ಬಳಿಯಿರುವ ಹಡ್ಸನ್ ನದಿಯ ಸಮೀಪದ ಅಂಗಡಿಯೊಂದರ ಬಳಿ ಗುಂಡಿ ದಾಳಿ ನಡೆದಿದ್ದು, ಸುಮಾರು 4 ಗಂಟೆಗಳ ಕಾಲ ಬಂದುಕೂ ದಾರಿಗಳು ಗುಂಡಿನ ದಾಳಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಘಟನೆ ಉಗ್ರರ ಕೃತ್ಯವೆಂಬುದರ ಕುರಿತು ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಘಟನೆಯಲ್ಲಿ ಮತ್ತಿಬ್ಬರು ಪೊಲೀಸ್ಅಧಿಕಾರಿಘಳು ಮತ್ತು ಓರ್ವ ನಾಗರೀಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT