ವಿದೇಶ

ಭಾರತ-ಅಮೆರಿಕಾ 2+2 ಮಾತುಕತೆ: ದ್ವಿಪಕ್ಷೀಯ, ಸ್ಥಳೀಯ, ಜಾಗತಿಕ ವಿಷಯಗಳ ಚರ್ಚೆ 

Sumana Upadhyaya

ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ಮಧ್ಯೆ 2+2 ಎರಡನೇ ಸುತ್ತಿನ ಮಾತುಕತೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ಎರಡೂ ದೇಶಗಳು ದ್ವಿಪಕ್ಷೀಯ, ಸ್ಥಳೀಯ ಮತ್ತು ಜಾಗತಿಕ ವಿಷಯಗಳ ಕುರಿತು ವಿಸ್ತಾರವಾಗಿ ಮಾತುಕತೆ ನಡೆಸುವ ಸಾಧ್ಯತೆಯಿದೆ.


ರಕ್ಷಣಾ ಇಲಾಖೆ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅಮೆರಿಕಾದ ಫಾಗ್ಗಿ ಬಾಟಮ್ ನಲ್ಲಿ ನಡೆಯುತ್ತಿರುವ ಮಾತುಕತೆಯಲ್ಲಿ ಭಾಗವಹಿಸಿದ್ದು ಅಮೆರಿಕಾ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೊ ಮತ್ತು ರಕ್ಷಣಾ ಇಲಾಖೆ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಆತಿಥ್ಯ ವಹಿಸಿದ್ದಾರೆ.


ಎರಡೂ ದೇಶಗಳ ನಾಲ್ವರು ನಾಯಕರು ತಮ್ಮ ತಮ್ಮ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದಾರೆ. ಎರಡೂ ದೇಶಗಳ ಪ್ರಧಾನಿ ಮತ್ತು ಅಧ್ಯಕ್ಷರು ಈ ವರ್ಷ ತೆಗೆದುಕೊಂಡ ತೀರ್ಮಾನಗಳು ಮತ್ತು ಮುಂದಿನ ವರ್ಷ ತೆಗೆದುಕೊಳ್ಳಲಿರುವ ನಿರ್ಧಾರಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿದ್ದಾರೆ. 


ಭಾರತ ಮತ್ತು ಅಮೆರಿಕಾ ಮಧ್ಯೆ ಮೊದಲ 2+2 ಮಾತುಕತೆ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ದೆಹಲಿಯಲ್ಲಿ ನಡೆದಿತ್ತು. ಇದು ಎರಡನೇ ಸುತ್ತಿನ ಮಾತುಕತೆಯಾಗಿದೆ.

SCROLL FOR NEXT