ಡೊನಾಲ್ಡ್ ಟ್ರಂಪ್ 
ವಿದೇಶ

ಅಧಿಕಾರ ದುರುಪಯೋಗ ಆರೋಪ: ಅಮೆರಿಕಾ ಅಧ್ಯಕ್ಷ ಟ್ರಂಪ್'ಗೆ ಸಂಸತ್ ವಾಗ್ದಂಡನೆ

ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ. 

ವಾಷಿಂಗ್ಟನ್: ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪಕ್ಕೆ ತುತ್ತಾಗಿರುವ ಅಮೆರಿಕಾ ಆಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಅಮೆರಿಗಾದ ಸಂಸತ್ತಿನ ಕೆಳಮನೆಯಾದ ಹಾಗೂ ಡೆಮಾಕ್ರಟ್ ಬಹುಮತವಿರುವ ಹೌಸ್ ಆಫ್ ರೆಪ್ರೆಸೆಂಟೇಟಿವ್ (ಜನಪ್ರತಿನಿಧಿ ಸಭೆ) ಬುಧವಾರ ವಾಗ್ದಂಡನೆಗೆ ಗುರಿಪಡಿಸಿದೆ.
 
ಈ ಮೂಲಕ ವಾಗ್ದಂಡನೆಗೆ ಗುರಿಯಾದ 3ನೇ ಅಧ್ಯಕ್ಷ ಎಂಬ ಅಪಖ್ಯಾತಿಗೆ ಡೊನಾಲ್ಡ್ ಟ್ರಂಪ್ ಗುರಿಯಾಗಿದ್ದಾರೆಂದು ಹೇಳಲಾಗುತ್ತಿದೆ. 

ಮುಂದಿನ ತಿಂಗಳು ಸಂಸತ್ತಿನ ಮೇಲ್ಮನೆಯಾದ ಸೆನಟ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆಯ ಮೇಲೆ ಮತದಾನ ನಡೆಯಲಿದೆ. ಆದರೆ, ಸೆನೆಟ್ ನಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದ ರಿಪಬ್ಲಿಕ್ ಪಕ್ಷ ಬಹುಮತ ಹೊಂದಿರುವ ಕಾರಣದಿಂದ ವಾಗ್ದಂಡನೆ ಪ್ರಕ್ರಿಯೆಗೆ ಸೋಲಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಹೀಗಾಗಿ ಟ್ರಂಪ್ ಪದಚ್ಯುತಿ ಆಗುವ ಭೀತಿ ಇಲ್ಲ. ಇದೇ ವೇಳೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ತಮ್ಮನ್ನು ವಾಗ್ದಂಡನೆ ಪ್ರಕ್ರಿಯೆ ಗುರಿಪಡಿಸಿದ್ದಕ್ಕೆ ಟ್ರಂಪ್ ಅವರು ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಟ್ರಂಪ್ ಅವರಿಗೆ ವಾಗ್ದಂಡನೆ ವಿಧಿಸುವ ಕುರಿತಂತೆ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ಬುಧವಾರ ಸುಮಾರು 6 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು. ಬಳಿಕ ವಾಗ್ದಂಡನೆಯನ್ನು ಮತಕ್ಕೆ ಹಾಕಲಾಯಿತು. 435 ಸದಸ್ಯರ ಹೌಸ್ ಆಫ್ ರೆಪ್ರೆಸೆಂಟೇಟಿವ್ ನಲ್ಲಿ ವಾಗ್ದಂಡನೆ ಪ್ರಕ್ರಿಯೆ ಪಾಸಾಗಲು 216 ಮತಗಳ ಅಗತ್ಯವಿದ್ದು, ಈ ಸದನದಲ್ಲಿ ವಿಪಕ್ಷದವಾದ ಡೆಮಾಕ್ರಟ್ ಪಕ್ಷದ 232 ಸದಸ್ಯರಿದ್ದಾರೆ. 

ಮುಂಬರುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಬಹುದಾದ ಜೋ ಬಿಡೆನ್ ಅವರ ವ್ಯಕ್ತಿತ್ವಕ್ಕೆ ಚ್ಯುತಿ ತರುವ ಮಾಹಿತಿಯನ್ನು ಬಹಿರಂಗಪಡಿಸುವಂತೆ ಟ್ರಂಪ್ ಅವರು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಅವರ ಮೇಲೆ ಒತ್ತರ ಹೇರುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕಾಗಿ ಅಮೆರಿಕಾದಿಂದ ಉಕ್ರೇನ್ ಸೇನಾ ಕಾರ್ಯಾಚಱಣೆಗಾಗಿ ಬಿಡುಗಡೆಯಾದ 400 ಮಿಲಿಯನ್ ಡಾಲರ್'ನ್ನು ಟ್ರಂಪ್ ತಡೆಹಿಡಿದಿದ್ದಾರೆನ್ನಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT