ಬಿಪಿನ್ ರಾವತ್ 
ವಿದೇಶ

ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್ ನೇಮಕ: ಅಮೆರಿಕಾ ಅಭಿನಂದನೆ

ದೇಶದ ಮೂರು ಸೇನಾಪಡೆಗಳ(ಭೂ ಸೇನೆ, ವಾಯುಪಡೆ, ನೌಕಾ ಪಡೆ) ಮೊದಲ ಮುಖ್ಯಸ್ಥರಾಗಿ ಆಯ್ಕೆಯಾಗಿರುವ  ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಅಮೆರಿಕಾ ಅಭಿನಂದಿಸಿದೆ.

ನವದೆಹಲಿ: ದೇಶದ ಮೂರು ಸೇನಾಪಡೆಗಳ(ಭೂ ಸೇನೆ, ವಾಯುಪಡೆ, ನೌಕಾ ಪಡೆ) ಮೊದಲ ಮುಖ್ಯಸ್ಥರಾಗಿ ಆಯ್ಕೆಯಾಗಿರುವ  ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಅಮೆರಿಕಾ ಅಭಿನಂದಿಸಿದೆ.

ಜನರಲ್ ಬಿಪಿನ್ ರಾವತ್ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾಗಿರುವುದರಿಂದ ಉಭಯ ದೇಶಗಳ ಮಿಲಿಟರಿಗಳ ನಡುವೆ ಮಾಹಿತಿ ಹಂಚಿಕೆ, ಜಂಟಿ ಕಾರ್ಯಾಚರಣೆ ಸೇರಿದಂತೆ ಜಂಟಿ ಸಹಭಾಗಿತ್ವದ ವೇಗವರ್ಧನೆ ಹೆಚ್ಚಿಸಲು ಇದರಿಂದ ನೆರವಾಗಲಿದೆ. ಎಂದು ಅಮೆರಿಕಾದ ಪ್ರಿನ್ಸಿಪಾಲ್ ಡೆಪ್ಯೂಟಿ ಅಸಿಸ್ಟೆಂಟ್ ಸೆಕ್ರಟರಿ ಆಲಿಸ್ ವೆಲ್ಸ್ ಟ್ವೀಟ್ ಮಾಡಿದ್ದಾರೆ. ಇದನ್ನು ಅಮೆರಿಕಾದ ರಾಯಬಾರಿ ಕೆನ್ ಜಸ್ಟರ್ಸ್ ರೀ ಟ್ವೀಟ್ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಈ ಹುದ್ದೆಯನ್ನು ಭಾರತ ಸರ್ಕಾರದಿಂದ ಸೃಷ್ಟಿಸಲಾಗಿದ್ದು, ಬಿಪಿನ್ ರಾವತ್ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ರಕ್ಷಣಾ ಪಡೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸುವವರಲ್ಲಿ ಇವರೇ ಮೊದಲಿಗರಾಗಿರುತ್ತಾರೆ. 

ಸೇನಾ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಅವರ ಅಧಿಕಾರವಧಿ ಇಂದು ಪೂರ್ಣಗೊಳ್ಳಲಿದೆ. ಈಗ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಮಾರ್ಚ್ 2022ರವರೆಗೂ ಅಧಿಕಾರ ನಡೆಸಲಿದ್ದಾರೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಈ ಹುದ್ದೆ ಸೃಷ್ಟಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!